Advertisement

ಮೇಕೆದಾಟು ರೀತಿಯಲ್ಲೇ ಮಹದಾಯಿ ಹೋರಾಟ ನಡೆಸುತ್ತೇವೆ: ಸತೀಶ್ ಜಾರಕಿಹೊಳಿ

03:22 PM Jan 18, 2022 | Team Udayavani |

ಬೆಳಗಾವಿ: ಕೋವಿಡ್‌ ಕಡಿಮೆಯಾದ ನಂತರ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

Advertisement

ನಗರದ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ವ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಅದರ ರೂಪರೇಷೆ ತಯಾರಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಒತ್ತಾಯಿಸಿ ಈಗಾಗಲೇ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದ್ದು, ಹೋರಾಟ ಅರ್ಧಕ್ಕೆ ನಿಂತಿಲ್ಲ. ಅದು ಯಶ್ವಸಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್, ಒಮಿಕ್ರಾನ್ ಭೀತಿ: ಸತತ 2ನೇ ವರ್ಷವೂ ಗಣರಾಜ್ಯೋತ್ಸವಕ್ಕೆ ವಿದೇಶಿ ಗಣ್ಯರ ಗೈರು

ಗೋವಾದಲ್ಲಿ ಚುನಾವಣಾ ಉಸ್ತುವರಿಯಾದ ದಿನೇಶ್‌ ಗೂಂಡುರಾವ್ ನೇತೃತ್ವದಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ತಯಾರಿ ನಡೆಸಿದ್ದೇವೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾನು ಬಹಿರಂಗ ಪ್ರಚಾರ ನಡೆಸುತ್ತೇನೆ ಎಂದರು.

Advertisement

ಬೆಳಗಾವಿಯಲ್ಲಿ ಆರಂಭವಾಗಿರುವ ಖಾಸಗಿ ಮಾರುಕಟ್ಟೆಯಿಂದ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಆದರೆ ಖಾಸಗಿ ಮಾರುಕಟ್ಟೆ ಪರ ಸರ್ಕಾರ ನಿಂತಿದೆ. ಅದನ್ನು ಸರ್ಕಾರವೇ ತಡೆಗಟ್ಟಬೇಕು ಎಂದರು.

ಮೇಯರ್‌ ಆಯ್ಕೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪಾಲಿಕೆಯಲ್ಲಿ ಈಗಾಗಲೇ ಅನಧಿಕೃತ ಮೇಯರ್‌, ಉಪ ಮೇಯರ್‌ ಇದ್ದಾರೆ, ಮೇಯರ್‌ ಆಗಿ ಶಾಸಕರಾದ ಅಭಯ ಪಾಟೀಲ್‌, ಉಪ ಮೇಯರ್‌ ಅನಿಲ ಬೆನಕೆ ಅವರ ಕೈಯಲ್ಲಿ ಆಡಳಿತವಿದೆ ಎಂದು ಟೀಕಿಸಿ  ಉಳಿದ ಸದಸ್ಯರು ಟೀ, ಬಿಸ್ಕೇಟ್‌ ಗೆ ಸೀಮಿತವಾಗಲಿದ್ದಾರೆ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next