Advertisement

ರಾಜ್ಯಪಾಲರು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ: ಸಿದ್ಧರಾಮಯ್ಯ

07:12 PM May 16, 2018 | udayavani editorial |

ಬೆಂಗಳೂರು : ”ರಾಜ್ಯದಲ್ಲಿ  ಕಾಂಗ್ರೆಸ್‌ – ಜೆಡಿಎಸ್‌ ನೂತನ ಸರಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲ ಇರುವುದರಿಂದ ರಾಜ್ಯಪಾಲರು ಅವಕಾಶ ಕೊಡಬೇಕು; ಒಂದೊಮ್ಮೆ ಅವರು ಬಿಜೆಪಿಗೆ ಸರಕಾರ ರಚಿಸಲು ಅವಕಾಶ ಕೊಟ್ಟರೆ ಅದು ಸಂವಿಧಾನ ವಿರೋಧಿ ಕೃತ್ಯವಾಗುವುದು ಮತ್ತು ನಾವದನ್ನು ಉಗ್ರವಾಗಿ ಪ್ರತಿಭಟಿಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಗೆ ಸರಕಾರ ರಚನೆಗೆ ಅವಕಾಶ ಕೊಡುವುದು ಸಂವಿಧಾನಕ್ಕೆ ವಿರುದ್ಧವಾಗುತ್ತದೆ. ಆದುದರಿಂದ ರಾಜ್ಯಪಾಲರು ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕು; ಒಂದೊಮ್ಮೆ ಅವರು ಸಂವಿಧಾನಕ್ಕೆ ಚ್ಯುತಿ ಉಂಟುಮಾಡವ ರೀತಿಯಲ್ಲಿ ನಡೆದುಕೊಂಡರೆ ಅದರಿಂದ ಅವರ ಹುದ್ದೆಯ ಘನತೆ ಗೌರವಕ್ಕೆ ಕುಂದುಂಟಾಗುತ್ತದೆ” ಎಂದು ಹೇಳಿದರು. 

ರಾಜ್ಯಪಾಲರಿಂದ ಆಹ್ವಾನ ಬಂದರೆ ಮಾತ್ರ

ನೂತನ ಸರಕಾರ ರಚಿಸಲು ರಾಜ್ಯಪಾಲರಿಂದ ಅಹ್ವಾನ ಬಂದರೆ ಮಾತ್ರವೇ ತಾನು ನಾಳೆ  ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ. 

ಕೇಂದ್ರ ಸಚಿವ ಜಾವಡೇಕರ್‌ ನೇತೃತ್ವದದಲ್ಲಿ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತೆಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು 

Advertisement

ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸಿ  ಪ್ರಮಾಣ ವಚನ ಬೋಧಿಸಿದ ಬಳಿಕ ಸದನದಲ್ಲಿ ವಿಶ್ವಾಸ ಮತ ಸಾಬೀತು ಪಡಿಸಲಾಗುವುದು; ಅನಂತರದಲ್ಲಿ ಸಂಪುಟ ರಚನೆ ಕುರಿತು ನಿರ್ಧರಿಸಲು ಬಿಜೆಪಿ ನಾಯಕರು ತೀರ್ಮಾನಿಸಿರವುದಾಗಿ ಯಡಿಯೂರಪ್ಪ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next