ಕೋಲ್ಕತಾ: ಟಿಎಂಸಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕಳೆದುಕೊಂಡ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ರಾಜ್ಯ ಸಚಿವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ತಮ್ಮ ಪಕ್ಷದ ಹೆಸರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆಗಿಯೇ ಉಳಿಯುತ್ತದೆ ಎಂದರು.
“ಟಿಎಂಸಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನದ ಬಗ್ಗೆ ನಾನು ಅಮಿತ್ ಶಾ ಅವರಿಗೆ ಕರೆ ಮಾಡಿರುವುದು ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯ ಹೇಳಿಕೆಯನ್ನು ತಿರಸ್ಕರಿಸಿದರು.
ಚುನಾವಣಾ ಆಯೋಗವು ಟಿಎಂಸಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬ್ಯಾನರ್ಜಿ ಅವರು ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಷಾ ಅವರಿಗೆ ಕರೆ ಮಾಡಿದ್ದಾರೆ ಎಂದು ಅಧಿಕಾರಿ ಮಂಗಳವಾರ ಹೇಳಿದ್ದರು.
ಬಿಜೆಪಿ ವಿರುದ್ಧ ಕಿಡಿ ಕಾರಿದ ಬ್ಯಾನರ್ಜಿ, 2024 ರ ಲೋಕಸಭೆ ಚುನಾವಣೆಯಲ್ಲಿ 200 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದರು.