ನವದೆಹಲಿ : ಕಾಂಗ್ರೆಸ್ ಪಕ್ಷವು ಗುಜರಾತ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ ಡಬಲ್ ಎಂಜಿನ್ ನ ವಂಚನೆಯಿಂದ ಅವರನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಭಾನುವಾರ ಹೇಳಿದ್ದಾರೆ.
500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗಿನ ರೈತರ ಸಾಲ ಮನ್ನಾ, ನಾವು ಗುಜರಾತ್‌ನ ಜನರಿಗೆ ನೀಡಿದ 8 ವಚನ’ವನ್ನು ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
“ಬಿಜೆಪಿಯ ‘ಡಬಲ್ ಇಂಜಿನ್’ ನ ಮೋಸದಿಂದ ಕಾಂಗ್ರೆಸ್ ನಿಮ್ಮನ್ನು ರಕ್ಷಿಸುತ್ತದೆ, ರಾಜ್ಯದಲ್ಲಿ ‘ಬದಲಾವಣೆಯ ಹಬ್ಬ’ ಆಚರಿಸುತ್ತೇವೆ” ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥ ಹೇಳಿದ್ದಾರೆ.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಕಸರತ್ತು ಆರಂಭಿಸಿದ್ದು, ತ್ರಿಕೋನ ಸ್ಪರ್ಧೆ ಕಂಡುಬಂದಿದೆ. 2017ರ ಚುನಾವಣೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 99 ಮತ್ತು ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು.