Advertisement

ಭಾರತದೊಂದಿಗೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದ: ಟ್ರಂಪ್ ಘೋಷಣೆ

10:02 AM Feb 25, 2020 | Hari Prasad |

ಅಹಮದಾಬಾದ್: ಎರಡು ದಿನಗಳ ಭಾರತ ಪ್ರವಾಸವನ್ನು ಕೈಗೊಂಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ ನ ಮೊಟೆರಾ ಸ್ಟೇಡಿಯಂನಲ್ಲಿ ಇಂದು ನಡೆದ ‘ನಮಸ್ತೇ ಟ್ರಂಪ್’ ಕಾರ್ಯಕ್ರಮದಲ್ಲಿ ಭರ್ಜರಿ ಘೋಷಣೆಯೊಂದನ್ನು ಮಾಡಿದ್ದಾರೆ.

Advertisement

ಅದೇನೆಂದರೆ ಅಮೆರಿಕಾ ಭಾರತದೊಂದಿಗೆ 3 ಬಿಲಿಯನ್ ಡಾಲರ್ ಮೊತ್ತದ ಬೃಹತ್ ರಕ್ಷಣಾ ಒಪ್ಪಂದಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಸಹಿ ಹಾಕಲಾಗುವುದು ಎಂದು ಟ್ರಂಪ್ ಅವರು ತಮ್ಮ ಭಾರತ ಪ್ರವಾಸದ ಮೊದಲ ದಿನವೇ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next