Advertisement

ತಮಿಳುನಾಡಿನಲ್ಲಿ AIADMK ಜತೆ ಮೈತ್ರಿ;5 ಕ್ಷೇತ್ರಗಳಲ್ಲಿ BJP ಸ್ಪರ್ಧೆ

01:00 PM Feb 19, 2019 | Harsha Rao |

ಚೆನ್ನೈ:ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಜೊತೆ ಕೈಜೋಡಿಸುವ ಮೂಲಕ ಸೀಟು ಹಂಚಿಕೆ ಮಾಡಿಕೊಂಡಿದೆ. ಇದರೊಂದಿಗೆ ದಕ್ಷಿಣ ರಾಜ್ಯಗಳಲ್ಲಿ ಕೆಸರಿ ಬಾವುಟ ಹಾರಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮತ್ತು ಬಿಜೆಪಿ ಮುಖಂಡ ಪಿಯೂಶ್ ಗೋಯಲ್ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮಿಳುನಾಡಿನಲ್ಲಿ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ ಎಂದು ಹೇಳಿದರು.

ತಮಿಳುನಾಡಿನ ಬಿಜೆಪಿ ಉಸ್ತುವಾರಿ ಗೋಯಲ್ ಮಾತನಾಡಿ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ,ಎಐಎಡಿಎಂಕೆ ಮೈತ್ರಿಕೂಟ 40 ಸ್ಥಾನಗಳಲ್ಲೂ(39 ತಮಿಳುನಾಡು, ಪಾಂಡಿಚೇರಿ 1) ಗೆಲುವು ಸಾಧಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಏತನ್ಮಧ್ಯೆ ಡಿಎಂಡಿಕೆ ಪಕ್ಷ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ, ಪಕ್ಷದ ವರಿಷ್ಠ ವಿಜಯ್ ಕಾಂತ್ ಅವರನ್ನು ಭೇಟಿಯಾಗುವುದಾಗಿ ಗೋಯಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next