Advertisement
ಮೊದಲ ಸುತ್ತಿನ ಕೊನ್ಸೆಲಿಂಗ್ ನಡೆಸಿದ್ದು, ವಿದ್ಯಾರ್ಥಿಗಳು ಫೆ. 16ಕ್ಕೆ ಕಾಲೇಜು ಪ್ರವೇಶ ಪಡೆದುಕೊಂಡಿದ್ದಾರೆ. ಇದೀಗ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಆರಂಭವಾಗಬೇಕಿದೆ. ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ಈ ವೇಳಾಪಟ್ಟಿಯನ್ನು ಪ್ರಕಟಿಸಬೇಕಿದೆ. ಇದೇ 5ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಕೆಇಎ ಮೂಲಗಳು ತಿಳಿಸಿವೆ.
ಯುಜಿ ನೀಟ್-2021ರ ಪ್ರವೇಶ ಪ್ರಕ್ರಿಯೆಯನ್ನು ಮಾ. 20ರೊಳಗೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಎರಡನೇ ಮತ್ತು ಮಾಪ್ ಅಪ್ ಸುತ್ತಿನ ಕೌನ್ಸೆಲಿಂಗ್ ಅನ್ನು ಉಳಿದ 18 ದಿನಗಳಲ್ಲಿ ನಡೆಸಬೇಕಿದೆ. ನಿಗದಿತ ಸಮಯದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆಯೇ ಅಥವಾ ಮತ್ತೆ ವಿಳಂಬವಾಗಲಿದೆಯೇ ಎಂಬುದನ್ನು ಕಾಯ್ದು ನೋಡಬೇಕಿದೆ.