Advertisement

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

09:17 PM Dec 24, 2024 | Team Udayavani |

ಲಂಡನ್‌: ಎಡಪಾರ್ಶ್ವದ ಸ್ನಾಯು ಸೆಳೆತಕ್ಕೆ ಸಿಲುಕಿರುವ ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ನಾಯಕ ಬೆನ್‌ ಸ್ಟೋಕ್ಸ್‌ 3 ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ.

Advertisement

ಮುಂದಿನ ತಿಂಗಳು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ನ್ಯೂಜಿಲೆಂಡ್‌ ವಿರುದ್ಧ ಹ್ಯಾಮಿಲ್ಟನ್‌ನಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದ ವೇಳೆ ಸ್ಟೋಕ್ಸ್‌ ಈ ಸಮಸ್ಯೆಗೆ ಸಿಲುಕಿದ್ದರು. ಇದಕ್ಕೂ ಮುನ್ನ ಇದೇ ಸಮಸ್ಯೆಯಿಂದಾಗಿ ಅವರು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾಗೂ ಪಾಕಿಸ್ತಾನ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಡಿರಲಿಲ್ಲ. ಈ ಸಮಸ್ಯೆಯಿಂದಾಗಿ 33 ವರ್ಷದ ಬೆನ್‌ ಸ್ಟೋಕ್ಸ್‌ ಅವರಿಗೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next