Advertisement

Income Tax; ಮುಂದಿನ ವರ್ಷ ಹಳೇ ತೆರಿಗೆ ಪದ್ದತಿ ರದ್ದು?

11:04 PM Jul 23, 2024 | Team Udayavani |

ಹೊಸದಿಲ್ಲಿ: ಈ ಬಾರಿಯ ಬಜೆಟ್‌ನಲ್ಲಿ ಹಳೆ ತೆರಿಗೆ ಪದ್ಧತಿಯ ಬಗ್ಗೆ ಯಾವುದೇ ವಿಷಯ ಪ್ರಸ್ತಾಪಿಸದ ಕಾರಣ, ಮುಂದಿನ ವರ್ಷದಿಂದ ಈ ತೆರಿಗೆ ಪದ್ಧತಿಯನ್ನು ರದ್ದು ಮಾಡಲಾಗುತ್ತದೆ ಎನ್ನಲಾಗಿದೆ.

Advertisement

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಳೇ ತೆರಿಗೆ ಪದ್ಧತಿಯನ್ನು ರದ್ದು ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಬಜೆಟ್‌ ಮಂಡನೆಯ ಬಳಿಕ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿ ಸಿದ ನಿರ್ಮಲಾ ಸೀತಾರಾಮನ್‌, ನಾವು ತೆರಿಗೆ ಪದ್ಧತಿಯನ್ನು ಸರಳೀಕರಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಳೇ ತೆರಿಗೆ ಪದ್ಧತಿ ಯನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ನಾವು ಕೈಗೊಂಡಿಲ್ಲ. ಆದರೆ ಅದು ಅಂತಿಮ ಹಂತದಲ್ಲಿದೆ ಎಂದು ಹೇಳಿದರು.

ಬಜೆಟ್‌ ಮಂಡನೆಯ ಸಮಯದಲ್ಲಿ ಹಳೇ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಯನ್ನು ಜಾರಿ ಮಾಡಿಲ್ಲ. 2020ರಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಜಾರಿ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next