Advertisement
ತುಮಕೂರು ಲೋಕ ಸಭಾ ಕ್ಷೇತ್ರ ದಿಂದ ಬಿಜೆಪಿಯ ಎಸ್.ಮಲ್ಲಿಕಾರ್ಜು ನಯ್ಯ ಅವರು ನಿರಂತರವಾಗಿ ಬಿಜೆಪಿ ಯಿಂದ ಗೆಲುವು ಸಾಧಿಸಿ, ಲೋಕಸಭಾ ಉಪ ಸಭಾಪತಿಯಾಗಿ (1991-96) ತುಮಕೂರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ದೇವೇಗೌಡರಿಗೆ ಸೋಲು ಕಾಂಗ್ರೆಸ್ ತೊರೆದು ಬಿಜೆ ಪಿಗೆ ಬಂದ ಜಿ.ಎಸ್.ಬಸವರಾಜು ಅವರು ಬಿಜೆಪಿ ಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 2014ರ ಚುನಾವಣೆಯಲ್ಲಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್‌ನಿಂದ ಗೆದ್ದಿದ್ದರು. 2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇ ಗೌಡ ಅವರು ಕ್ಷೇತ್ರದಿಂದ ಸ್ಪರ್ಧಿಸಿ ದ್ದರಾದರೂ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ವಿರುದ್ಧ ಸೋತಿದ್ದರು. ಜಿ.ಎಸ್.ಬಸವರಾಜು ಚುನಾವಣ ರಾಜಕೀಯದಿಂದ ನಿವೃತ್ತಿ ಘೋಷಿ ಸಿರುವುದರಿಂದ ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಇದೆ. ಇದರ ನಡುವೆ ಜೆಡಿಎಸ್‌ನಿಂದ ಯಾರು ಅಭ್ಯರ್ಥಿ ಎಂಬುದು ಖಚಿತ ವಾಗಿಲ್ಲ. ದೇವೇಗೌಡರ ಕುಟುಂಬದ ಸದಸ್ಯರು ಇಲ್ಲಿಂದಲೇ ಸ್ಪರ್ಧಿ ಸಬೇಕು ಎಂಬುದು ಜೆಡಿಎಸ್ ಮುಖಂಡರ ಒತ್ತಾಯ.
Related Articles
ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಇದೆ. ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಸ್. ಪಿ.ಚಿದಾನಂದ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಪಕ್ಷದ ಸಂಘಟನೆಗೆ ಒತ್ತು ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಟಾಕ, ಬಿಜೆಪಿ ಜಿಲ್ಲಾ ಖಜಾಂಚಿಯಾಗಿರುವ ಶ್ರೀಸಿದ್ಧಗಂಗಾ ಆಸ್ಪತ್ರೆಯ ನಿರ್ದೇ ಶಕ ಡಾ| ಎಸ್. ಪರಮೇಶ್, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ವಿ.ಪ.ಮಾಜಿ ಸದಸ್ಯ ಡಾ| ಎಂ.ಆರ್.ಹುಲಿ ನಾಯ್ಕರ್, ನಿವೃತ್ತ ಐಎಎಸ್ ಅಧಿಕಾರಿ ಡಾ| ಸಿ. ಸೋಮ ಶೇಖರ್, ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಟಿಕೆಟ್ ಆಕಾಂಕ್ಷಿಗಳಾ ಗಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡರು ಸೂಚಿಸಿದರೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೆಸರೂ ಪ್ರಬಲವಾಗಿ ಕೇಳಿಬರುತ್ತಿದೆ.
Advertisement
ವರಿಷ್ಠರ ನಿರ್ಧಾರಕ್ಕೆ ಬದ್ಧತುಮಕೂರು ಕ್ಷೇತ್ರ ಬಿಟ್ಟು ಕೊಡ ಬೇಕು ಎನ್ನುವುದು ಜೆಡಿಎಸ್ ಮುಖಂ ಡರ ಬೇಡಿಕೆ ಯಾ ಗಿದೆ. ಜೆಡಿಎಸ್ ಪಕ್ಷಕ್ಕೆ ಟಿಕೆಟ್ ನೀಡಿದರೆ ಬಿಜೆಪಿ, ಜೆಡಿಎಸ್ ಒಂದಾಗಿ ಹೆಚ್ಚಿನ ಮತಗಳಲ್ಲಿ ಗೆಲ್ಲಲು ಸಹಕಾರಿಯಾಗುತ್ತದೆ. ಈ ಹಿಂದೆ ಜೆಡಿಎಸ್‌ನಿಂದ ಸಿ.ಎನ್. ಭಾಸ್ಕರಪ್ಪ ಗೆಲುವು ಸಾಧಿಸಿದ್ದರು. ಆದರೂ ನಮ್ಮ ಪಕ್ಷದ ವರಿಷ್ಠರು ಯಾವ ನಿರ್ಧಾರ ತೆಗೆದುಕೊಂಡರೂ ನಾವು ಬದ್ಧ ಎನ್ನುತ್ತಾರೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ. ಗ್ಯಾರಂಟಿ ಮೇಲೆ ವಿಶ್ವಾಸ
ತುಮಕೂರು ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಮಧುಗಿರಿ, ಕೊರಟಗೆರೆ, ಗುಬ್ಬಿ, ತಿಪಟೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದು, ಕಾಂಗ್ರೆಸ್‌ಗೆ ಜನ ಬೆಂಬಲವಿದೆ. ಸರಕಾರದ ಗ್ಯಾರಂಟಿ ಮತಗಳಾಗಿ ಪರಿವರ್ತನೆಯಾಗುತ್ತದೆ ಎಂಬ ವಿಶ್ವಾಸ ಕಾಂಗ್ರೆಸ್‌ನದ್ದು. ಮುಖಂಡರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕೆಂದು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಸಚಿವರಾಗಿರುವ ಡಾ| ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಅವರಿಗೆ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಆದ್ದರಿಂದ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಪಕ್ಷ ನನಗೇ ಟಿಕೆಟ್ ನೀಡುತ್ತದೆ ಎಂದು ಭಾವಿಸಿ ಕ್ಷೇತ್ರದಲ್ಲಿ ಹೆಚ್ಚು ಓಡಾ ಡುತ್ತಿದ್ದಾರೆ. ಸಚಿವ ರಾಜಣ್ಣ ಅವರು ಪಕ್ಷದ ವರಿಷ್ಠರು ಸ್ಪರ್ಧಿಸುವಂತೆ ಹೇಳಿದರೆ ಸ್ಪರ್ಧೆ ಮಾಡಲು ಸಿದ್ಧ ಎಂದಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದೇ ವಂಚಿತರಾಗಿ ಕಾಂಗ್ರೆಸ್‌ಗೆ ಬಂದರೆ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇ ಗೌಡರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎನ್ನುವ ಮಾತೂ ಕಾಂಗ್ರೆಸ್ ವಲಯದಲ್ಲಿದೆ. ಚಿ.ನಿ.ಪುರುಷೋತ್ತಮ್