Advertisement

ಬಿಜೆಪಿ ಯುವ ನಾಯಕ,ಸಂಸದ ವರುಣ್‌ ಗಾಂಧಿ ಕಾಂಗ್ರೆಸ್‌ಗೆ ? 

09:47 AM Nov 28, 2017 | Team Udayavani |

ಹೊಸದಿಲ್ಲಿ: ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಜೆಪಿ ಸಂಸದ ವರುಣ್‌ ಗಾಂಧಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Advertisement

ರಾಹುಲ್‌ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗುತ್ತಿದ್ದಂತೆ ಸುಲ್ತಾನ್‌ಪುರದ ಸಂಸದ  ವರುಣ್‌ ಗಾಂಧಿ ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ಹಿರಿಯ ಕಾಂಗ್ರೆಸ್‌ ನಾಯಕ ಹಾಜಿ ಮಂಜೂರ್‌ ಅಹಮದ್‌ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ‘ವರುಣ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಇಲ್ಲವೆ ಅಥವಾ ಕಚೇರಿಯ ಪ್ರಮುಖರನ್ನಾಗಿ ನೇಮಕ ಮಾಡಿಕೊಳ್ಳಬಹುದು’ ಎಂದಿದ್ದಾರೆ.

ಇದೇ ವೇಳೆ ‘ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವರುಣ್‌ ಗಾಂಧಿ ಅವರ ಪಕ್ಷ ಸೇರ್ಪಡೆಯಲ್ಲಿ ವೇಗವರ್ಧಕವಾಗಿ ಪಾತ್ರ ವಹಿಸಲಿದ್ದಾರೆ’ಎಂದಿದ್ದಾರೆ.

ಇನ್ನೊಂದೆಡೆ ಆಗ್ರಾದ ನಗರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಮ್‌ ಟೆಂಡನ್‌ ಅವರೂ ವರುಣ್‌ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. 

Advertisement

2009 ರ ಲೋಕಸಭಾ ಚುನಾವಣೆ ವೇಳೆ ಹಿಂದುತ್ವದ ಪರವಾಗಿ  ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಫೈರ್‌ ಬ್ರ್ಯಾಂಡ್‌ ಆಗಿ ಭಾರೀ ಸುದ್ದಿಯಾಗಿದ್ದ ವರುಣ್‌ ಗಾಂಧಿ  ಇತ್ತೀಚೆಗೆ ರೋಹಿಂಗ್ಯಾ ಮುಸ್ಲಿಮರ ಪರ ಮಾತನಾಡುವ ಮೂಲಕ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು ಮತ್ತು ಸಾಮಾಜಿಕ ತಾಣಗಳಲ್ಲಿ ಟ್ರೋಲ್‌ ಆಗಿದ್ದರು.

ವರುಣ್‌ ಅವರ ತಾಯಿ ಮನೇಕಾ ಗಾಂಧಿ ಅವರು ಪ್ರಧಾನಿ ಮೋದಿ ಅವರ ಸಂಪುಟದ ಪ್ರಮುಖ ಸಚಿವೆಯಾಗಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನಿರ್ವಹಿಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next