Advertisement

ಕೊಲೆಯಾದ ಫಾಝಿಲ್ –ಮಸೂದ್ ಮನೆಗಳಿಗೂ ಭೇಟಿ ಕೊಡುತ್ತೇನೆ: ಸಿಎಂ ಬೊಮ್ಮಾಯಿ

09:41 AM Aug 01, 2022 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

Advertisement

ಕೊಲೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಸಿಎಂ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿತ್ತು.

ಇದನ್ನೂ ಓದಿ:ಬೊಮ್ಮಾಯಿ ತಾರತಮ್ಯ ಧೋರಣೆ ಪ್ರದರ್ಶಿಸಿ ಮುಖ್ಯಮಂತ್ರಿ ಹುದ್ದೆಗೆ ಕಳಂಕ: ಬಿ.ಎಂ. ಫಾರೂಕ್

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ.  ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್ಐಎ ಗೆ ವರ್ಗಾವಣೆ ಮಾಡುತ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡುತ್ತೇವೆ. ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next