Advertisement

ರಾಜ್ ಕುಟುಂಬ ಅನುಮತಿ ನೀಡಿದರೆ ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ: ನಟ ವಿಶಾಲ್

02:14 PM Sep 10, 2022 | Team Udayavani |

ಮೈಸೂರು: ಹಿಂದಿನಿಂದಲೂ ಮೈಸೂರಿನ ಶಕ್ತಿಧಾಮದ ಬಗ್ಗೆ ವಿಶೇಷ ಒಲವು ಹೊಂದಿದ್ದ ತಮಿಳು ನಟ ವಿಶಾಲ್ ಇಂದು ಭೇಟಿ ನೀಡಿದರು.

Advertisement

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಶಾಲ್, ನಾನು ಯಾವಾಗಲೂ ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಅದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಲಿ ಎಂದು ಮನವಿ ಮಾಡಿದರು.

ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತು. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ. ಮಕ್ಕಳು ತುಂಬಾ ಲವಲವಿಕೆಯಿಂದ ಇದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಗೀತಮ್ಮ ಅವರದ್ದು ಅತ್ಯುತ್ತಮವಾದ ಕೆಲಸ. ಈ ಬಗ್ಗೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ರಾಜ್ ಕಮಾರ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.

ಇದನ್ನೂ ಓದಿ:ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ : ಹೋರಾಟಗಾರರನ್ನು ಬಂಧಿಸಿದ ಪೊಲೀಸರು

ಮಕ್ಕಳ ಜೊತೆ ನಾನು ಮಾತನಾಡಿದೆ. ಡ್ಯಾನ್ಸ್ ಮಾಡಿದರು, ಆಟವಾಡಿದರು. ತುಂಬಾ ಉತ್ಸಹದಿಂದಿದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ನಟ ವಿಶಾಲ್ ಹೇಳಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next