Advertisement

“BYR ಗೆಲ್ಲಿಸಿ” ಶಾಮನೂರು ಹೇಳಿಕೆ: ಕೈಗೆ ಕಸಿವಿಸಿ

12:28 AM Jan 28, 2024 | Team Udayavani |

ಬೆಂಗಳೂರು: ಶಿವಮೊಗ್ಗ ದಲ್ಲಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಅವರನ್ನೇ ಆಯ್ಕೆ ಮಾಡುವುದು ಸಾರ್ವಜನಿಕರ ಕರ್ತವ್ಯ ಎಂದು ಬಿ.ವೈ.ರಾಘವೇಂದ್ರ ಪರವಾಗಿ ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿರುವುದು ಕಾಂಗ್ರೆಸ್‌ ಅನ್ನು ಮುಜುಗರಕ್ಕೆ ತಳ್ಳಿದೆ.

Advertisement

ಕಾಂಗ್ರೆಸ್‌ನ ಹಿರಿಯ ನಾಯಕ ರಾಗಿದ್ದು, ಬಿಜೆಪಿ ಸಂಸದರನ್ನು ಆಯ್ಕೆ ಮಾಡಬೇಕೆಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಈಗ ಪಕ್ಷದೊಳಗಿಂದಲೇ ಕೇಳಿ ಬರುತ್ತಿವೆ. ಸಿದ್ದರಾಮಯ್ಯ ಸಂಪುಟದಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಸ್ವತಃ ಅವರು ಕೂಡ ಶಾಸಕರಾಗಿದ್ದಾರೆ. ಅಪ್ಪ-ಮಗ ಆಡಳಿತ ಪಕ್ಷದ ಶಾಸಕರಾಗಿದ್ದುಕೊಂಡು ಇಂಥ ಹೇಳಿಕೆ ನೀಡುವುದು ಒಂದು ರೀತಿ ಪಕ್ಷ ವಿರೋಧಿ ಚಟುವಟಿಕೆ ಆಗು ತ್ತದೆ ಎಂಬ ಅಭಿಪ್ರಾಯ ಪಕ್ಷದಲ್ಲಿದೆ.

ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು ಈ ರೀತಿ ಹೇಳಿಕೆ ನೀಡುವುದು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಬಯಸಿದಾಗ, “ಅವರು ಹಿರಿಯ ಶಾಸಕರಾಗಿದ್ದು, ಅವರ ಹೇಳಿಕೆ ಯನ್ನು ನಾನು ಗಮನಿಸಿಲ್ಲ. ಅದನ್ನು ನೋಡಿ ಮಾತನಾಡುತ್ತೇನೆ’ ಎಂದಷ್ಟೇ ಹೇಳುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಶಾಮನೂರು ಪ್ರೀತಿಗೆ ಋಣಿ: ರಾಘವೇಂದ್ರ
ಶಿವಮೊಗ್ಗ: ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಮಾಜದ ಹಿರಿಯ ಮುಖಂಡರು. ಕ್ಷೇತ್ರದಲ್ಲಿ ನನ್ನ ಕೆಲಸ ನೋಡಿ ಸದಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವತ್ತೂ ನೇರ ಮಾತಿಗೆ ಹೆಸರಾದ ಅವರ ಪ್ರೀತಿಗೆ ನಾನು ಋಣಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Advertisement

ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಈ ಸಲ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲಲಿ¨ªಾರೆ.
-ಡಿ.ಕೆ. ಶಿವಕುಮಾರ್‌, ಡಿಸಿಎಂ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದಿರುವ ಶಾಮನೂರು ಶಿವಶಂಕರಪ್ಪ ಅವರದು ವೈಯಕ್ತಿಕ ಅಭಿಪ್ರಾಯ ಇರಬಹುದು. ನನಗೆ ಅದರ ಬಗ್ಗೆ ಗೊತ್ತೂ ಇಲ್ಲ. ನಾನು ಪ್ರತಿಕ್ರಿಯಿಸುವುದೂ ಇಲ್ಲ. –ಡಾ| ಜಿ. ಪರಮೇಶ್ವರ್‌, ಗೃಹಸಚಿವ

ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರೇ ಬಿಜೆಪಿ ಗೆಲ್ಲಿಸಿ ಎಂದಿದ್ದಾರೆ. ಮೋದಿ ಗೆಲ್ಲಿಸಿ ಎಂದಿದ್ದಾರೆ. ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲಾಗಿದೆ.
– ಆರ್‌.ಅಶೋಕ್‌, ವಿಧಾನಸಭೆ ವಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next