ವಿಜಯಪುರ: ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಿಲ್ಲೆಯ ಎಂ.ಎಸ್.ರುದ್ರಗೌಡರ ಬೆಂಗಳೂರಿನಲ್ಲಿರುವ ಬೋರ್ಡ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿದ ರುದ್ರಗೌಡ, ದ್ರಾಕ್ಷಿ ಮತ್ತು ಒಣದ್ರಾಕ್ಷಿ ಮಾರಾಟಕ್ಕೆ ಮಾರುಕಟ್ಟೆ ಸಮಸ್ಯೆ, ಬೆಲೆ ಕುಸಿತ, ಅಕಾಲಿಕ ಮಳೆಯಿಂದ ಸದಾ ಸಮಸ್ಯೆಯ ಸುಳಿಯಲ್ಲಿ ಸಿಲುಕುತ್ತಿರುವ ದ್ರಾಕ್ಷಿ ಬೆಳೆಗಾರರ ಸಮಸ್ಯೆಗೆ ಪರಿಹಾರ ಕೊಡಿಸಲು ಹಾಗೂ ಜಿಲ್ಲೆಗೆ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ (ವೈನ್ ಪಾರ್ಕ) ಸ್ಥಾಪನೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪಾತ್ರ ಹಿರಿದಾಗಿದೆ ಎಂದಿದ್ದಾರೆ.
ಅಲ್ಲದೇ ದ್ರಾಕ್ಷಿ ಬೆಳೇಗಾರರ ಹಿತದೃಷ್ಟಿಯಿಂದ ವೈನ್‍ಬೋರ್ಡ್ 140 ಕೋಟಿ ರೂ. ಅನುದಾನ ಮಂಜೂರು ಮಾಡುವಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರಮಿಸಿರುವ ರುದ್ರಗೌಡ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ ದಿನವೇ, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡನ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಹಲವು ವಿಷಯಗಳ ಕುರಿತಂತೆ ಚರ್ಚೆ ನಡೆಸಿದರು.
ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡನ ವ್ಯವಸ್ಥಾಪಕ ನಿರ್ದೇಶಕ ಟಿ.ಸೋಮು, ಕಾರ್ಯದರ್ಶಿ ಸರ್ವೇಶ ಮತ್ತಿತರರು ಇದ್ದರು.
ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆ: ಬಬಲೇಶ್ವರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆಲುವು