Advertisement

ಅಪ್ರಾಪ್ತರಿಂದ ಮದ್ಯ ಮಾರಾಟ: ಹೈ ನೋಟಿಸ್‌

06:50 AM Sep 15, 2017 | |

ಬೆಂಗಳೂರು: ರಾಜ್ಯದಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ 21 ವರ್ಷಕ್ಕಿಂತ ಕಡಿಮೆ ವಯೋಮಾನದವರಿಗೂ ಮದ್ಯಮಾರಾಟ ಮಾಡುತ್ತಿದ್ದು ಈ ಸಂಬಂಧ ಸೂಕ್ತ ಮಾರ್ಗಸೂಚಿಗಳನ್ನು ರಚಿಸಿ ಕ್ರಮಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 17 ವರ್ಷದ ಯುವತಿಯೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

Advertisement

ಈ ಕುರಿತು ಬೆಂಗಳೂರಿನಲಯ ಸಜನ್‌ ಮರಿಯಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಕೆ ಮುಖರ್ಜಿ ಹಾಗೂ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ರಾಜ್ಯಸರ್ಕಾರ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆಸಲ್ಲಿಸುವಂತೆ ಸೂಚಿಸಿದೆ. ಅಬಕಾರಿ ಕಾಯಿದೆ ವಿಫ‌ಲವಾದ ಪರಿಣಾಮ 21 ವರ್ಷಕ್ಕಿಂತ ಕಡಿಮೆ ವಯೋಮಿತಿಯವರು ಮದ್ಯ ಇನ್ನಿತರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆ ಅಪ್ರಾಪ್ತರಿಗೂ ಪರವಾನಗಿ ನೀಡುತ್ತಿದೆ. ಇದನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಮದ್ಯಮಾರಾಟಕ್ಕೆ ಸೂಕ್ತ ಮಾರ್ಗಸೂಚಿ ರಚನೆಗೆ ಒತ್ತಾಯಿಸಿದ್ದಾರೆ. ಅಬಕಾರಿ ಕಾಯಿದೆ ಕಟ್ಟುನಿಟ್ಟಿನ ಜಾರಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next