Advertisement

ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಜಯಭೇರಿ, ಬಿಜೆಪಿಯ ಎಂಟಿಬಿಗೆ ಮುಖಭಂಗ

10:39 AM Dec 13, 2019 | Nagendra Trasi |

ಹೊಸಕೋಟೆ/ಬೆಂಗಳೂರು: ಉಪಚುನಾವಣೆ ನಡೆದ 15 ಕ್ಷೇತ್ರಗಳ ಪೈಕಿ ಹೊಸಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ಎಂಟಿಬಿ ನಾಗರಾಜ್ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.

Advertisement

ಬಿಜೆಪಿಯ ಎಂಟಿಬಿ ನಾಗರಾಜ್ ಅವರನ್ನು 11 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಪರಾಜಯಗೊಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಎಂಟಿಬಿ 7,597 ಮತಗಳ ಅಂತರದಿಂದ ಬಿಜೆಪಿಯ ಶರತ್ ಬಚ್ಚೇಗೌಡ ವಿರುದ್ಧ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು ಕೊನೆಗೂ ಬಿಜೆಪಿ ಟಿಕೆಟ್ ಪಡೆದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಆದರೆ ಕಳೆದ ಬಾರಿ ಏಳು ಸಾವಿರ ಮತಗಳಿಂದ ಸೋತಿದ್ದ ಬಿಜೆಪಿಯ ಶರತ್ ಬಚ್ಚೇಗೌಡ ಪಕ್ಷದ ಹೈಕಮಾಂಡ್ ಮನವಿಗೂ ಜಗ್ಗದೇ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದರು. ಈ ಬಗ್ಗೆ ಸಿಎಂ ಯಡಿಯೂರಪ್ಪ ಕೂಡಾ ಶರತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿ ಪರಿಣಾಮ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತ್ರಿಕೋನ ಸ್ಪರ್ಧೆ ನಡೆದಿದ್ದು, ಕೊನೆಗೂ ಬಿಜೆಪಿಯ ಎಂಟಿಬಿ ನಾಗರಾಜ್ ಗೆಲುವಿಗೆ ತಡೆ ಹಾಕಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next