Advertisement
ಇನ್ನೊಂದೆಡೆ ಶಾಸಕ ಶ್ರೀಮಂತ ಪಾಟೀಲ್ ಎಲ್ಲ 11 ಶಾಸಕರು ಹಾಗೂ ಸೋತವರನ್ನು ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಎಂ.ಟಿ.ಬಿ.ನಾಗರಾಜ್ ತಮಗೆ ಸಚಿವ ಸ್ಥಾನ ನೀಡಿ ಇಲ್ಲವೇ ತಮ್ಮ ಸೋಲಿಗೆ ಕಾರಣರಾದ ಅಪ್ಪ- ಮಗನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಒತ್ತಡ ಹೇರಲಾರಂಭಿಸಿದ್ದಾರೆ. ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಮಹೇಶ್ ಕುಮಟಳ್ಳಿ, ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.
Related Articles
Advertisement
ಬರಬೇಡಿ ಎಂದು ಹೇಳಬೇಕಿತ್ತು: ಅವರಿಗೆ ಕಷ್ಟವಾ ಗಿದ್ದರೆ ಅಂದೇ ಪಕ್ಷಕ್ಕೆ ಬರಬೇಡಿ ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಹೀಗೆ ಚರ್ಚಿಸುವುದು ಸರಿಯಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದೇ ಹೋದರೆ ಜನ ನೋಡುತ್ತಾರೆ. ಜನರಿಗೂ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಸೋತ ಲಕ್ಷ್ಮ ಣ ಸವದಿಯವರನ್ನು ಉಪಮುಖ್ಯ ಮಂತ್ರಿ ಮಾಡಲಾಗಿದೆ. ಹಾಗೆಯೇ ವಿಶ್ವನಾಥ್ ಅವ ರನ್ನು ಸಚಿವರನ್ನಾಗಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.
ಕುಮಟಳ್ಳಿ ಕಣ್ಣೀರು: ಪಕ್ಷ ಬಿಟ್ಟು ಪಕ್ಷಕ್ಕೆ ಬಂದು ಗೆದ್ದರೂ ಏನು ಪ್ರಯೋಜನ. ಮುಖ್ಯಮಂತ್ರಿಗಳು ಮಾತು ಕೊಟ್ಟಿದ್ದಾರೆ. ಆದರೂ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎಂದಿದ್ದಾರೆ. ಬಿಜೆಪಿ ಸರ್ಕಾರ ಬರಲು ಯಾರ ಪಾಲು ಎಷ್ಟಿದೆಯೋ ಗೊತ್ತಿಲ್ಲ. ರಮೇಶ್ ಜಾರಕಿಹೊಳಿ ಮೊದಲಿದ್ದರೆ, ಅವರ ಹಿಂದೆ ಎರಡನೆಯವನಾಗಿ ನಾನಿದ್ದೆ. ಇದೀಗ ನಾನೇ ಸಂಪುಟದಲ್ಲಿ ಇಲ್ಲ ಅಂದರೆ ಹೇಗೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಬಳಿ ಮಹೇಶ್ ಕುಮಟಳ್ಳಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಸಚಿವನಾಗದಿದ್ದರೆ ಕ್ಷೇತ್ರದ ಜನತೆಗೆ ಮುಖ ತೋರಿಸುವುದು ಹೇಗೆ. ಸಚಿವನನ್ನಾಗಿ ಮಾಡದಿದ್ದರೆ ಈ ಹಿಂದೆ ಮಾತು ಕೊಟ್ಟಿದ್ದೇಕೆ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದೇ ಧಾಟಿಯಲ್ಲಿ ಮಾತನಾಡಿರುವ ಶಾಸಕ ಶ್ರೀಮಂತ ಪಾಟೀಲ್, ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಗೆದ್ದ 11 ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು.
11 ಶಾಸಕರನ್ನು ಮಂತ್ರಿ ಮಾಡುವ ವಿಶ್ವಾಸವಿದೆ. ಸಚಿವ ಸ್ಥಾನ ನೀಡದಿದ್ದರೆ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ. ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೈತಪ್ಪುವ ವಿಚಾರ ನನಗೆ ಗೊತ್ತಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಎಂ.ಟಿ.ಬಿ. ನಾಗರಾಜ್, ಎಚ್.ವಿಶ್ವನಾಥ್ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಮಧ್ಯೆ, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಎಂ.ಟಿ.ಬಿ.ನಾಗರಾಜ್ ಬಳಿಕ ಪ್ರತಿಕ್ರಿಯಿಸಿ, ಸಂಪುಟಕ್ಕೆ ಸೇರ್ಪಡೆಯಾಗದಿರು ವುದಕ್ಕೆ ಯಾವುದೇ ಬೇಸರ, ಅಸಮಾಧಾನವಿಲ್ಲ ಎಂದು ಹೇಳಿದರು. ಪಕ್ಷಕ್ಕೆ ಬಂದ ಎಲ್ಲರನ್ನು ಗೌರವಯುತವಾಗಿ ನಡೆಸಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಾಗಿ ಆರ್.ಶಂಕರ್ ಅವರನ್ನು ಮಂತ್ರಿ ಮಾಡುತ್ತಾರೆ. ಈ ಸಂಬಂಧ ನಾನು ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳ ಮಾತಿನ ಮೇಲೆ ನಂಬಿಕೆ ಇದೆ. ನನ್ನ ಪರವಾಗಿ ಮಾತನಾಡಿರುವ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು 17 ಮಂದಿ ಒಗ್ಗಟ್ಟಾಗಿದ್ದು, ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.