Advertisement

150 ಕ್ಷೇತ್ರಗಳಲ್ಲಿ ಗೆಲುವು: ಬಿಎಸ್‌ವೈ

06:45 AM Feb 11, 2018 | Team Udayavani |

ಲಿಂಗಸುಗೂರು: ರಾಜ್ಯದ 224 ಕ್ಷೇತ್ರಗಳ ಪೈಕಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

Advertisement

ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ನಾವು 150 ಸ್ಥಾನಗಳ ಗುರಿ ಮುಟ್ಟುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮಗೆ ವ್ಯಕ್ತಿ ಮುಖ್ಯವಲ್ಲ ಗೆಲುವು ಮುಖ್ಯ. ಮಾಚ್‌13ರಂದು ರಾಯಚೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಇಲ್ಲಿ ಎರಡು ಲಕ್ಷ ಜನರನ್ನು ಸೇರಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next