Advertisement
ಗಮನ ಸೆಳೆಯುವ ಸೂಚನೆ ವೇಳೆ ವಿಷಯ ಪ್ರಸ್ತಾವಿಸಿದ ಅವರು, ಸಿಹಿ ನೀರನ್ನು ಸಂಗ್ರಹಿಸಿ, ಅಂತರ್ಜಲ ಹೆಚ್ಚಿಸುವ ಉದ್ದೇಶದಿಂದ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ. ಆದರೆ ಉದ್ದೇಶವೇ ಈಡೇರದಂತೆ ಯೋಜನೆಯನ್ನು ನಿರ್ವಹಿಸಿದ್ದು, ಅಧಿಕಾರಿಗಳಿಗೆ ಕರಾವಳಿ ಭಾಗದ ಸಮಸ್ಯೆಗಳನ್ನು ಅರ್ಥ ಮಾಡಿಸುವುದೇ ಕಷ್ಟವಾಗಿದೆ ಎಂದರು.
ಬೆಳಗಾವಿ: ಒಂದು ಕೋರ್ಸ್‌ಗೆ ಒಂದೇ ರೀತಿಯ ಶಿಷ್ಯವೇತನ ನೀಡಬೇಕು. ಈ ಮೂಲಕ ತಾರತಮ್ಯ ಹೋಗಲಾಡಿಸಬೇಕೆಂದು ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಮನವಿ ಮಾಡಿದರು.
Related Articles
Advertisement
ಪ್ರಸ್ತುತ ವಿವಿಧ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳಿಗೆ ನೀಡಲಾಗುವ ಶಿಷ್ಯವೇತನದಲ್ಲಿ ವ್ಯತ್ಯಾಸ ಇದೆ. ಇದರಿಂದ ಮೆರಿಟ್ ವಿದ್ಯಾರ್ಥಿಗಳಿಗೆ ಕಡಿಮೆ ಶಿಷ್ಯವೇತನ ದೊರೆತರೆ, ಕಡಿಮೆ ರ್‍ಯಾಂಕ್ ಪಡೆದ ವಿದ್ಯಾರ್ಥಿಗೆ ಹೆಚ್ಚು ಶಿಷ್ಯವೇತನ ಸಿಗುವ ಸಾಧ್ಯತೆ ಇದೆ ಎಂದರು.
ಇದಕ್ಕೆ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್ ಪರವಾಗಿ ಪ್ರತಿಕ್ರಿಯಿಸಿದ ಸಭಾನಾಯಕ ಬೋಸರಾಜು ಅವರು, ಇದು ಉತ್ತಮ ಸಲಹೆಯಾಗಿದ್ದು, ಈ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದರು.
ಬೆನ್ನು ಹುರಿ ಅಪಘಾತ: ಸಹಾಯಧನಕ್ಕೆ ಆಗ್ರಹಬೆಳಗಾವಿ: ರಾಜ್ಯದಲ್ಲಿ ಬೆನ್ನುಹುರಿ ಅಪಘಾತದಿಂದ ಸುಮಾರು 20 ಸಾವಿರಕ್ಕೂ ಅಧಿಕ ಅಂಗವೈಕಲ್ಯರಾಗಿದ್ದಾರೆ. ಅಂಥವರಿಗೆ ಸರಕಾರ ಮಾಸಿಕ ಕನಿಷ್ಠ 5 ಸಾವಿರ ರೂ. ಸಹಾಯಧನ ನೀಡಬೇಕೆಂದು ಕೆ. ಹರೀಶ್ ಕುಮಾರ್ ಆಗ್ರಹಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾವಿಸಿದ ಅವರು, ಬೆನ್ನುಹುರಿ ಅಪಘಾತದಿಂದ ಅಂಗವಿಕಲರಾದವರಿಗೆ ಸರ ಕಾರ ಮಾಸಿಕ 1,500 ರೂ. ನೀಡುತ್ತಿದೆ. ಇದು ಯಾವುದಕ್ಕೂ ಸಾಕಾಗುತ್ತಿಲ್ಲ ಎಂದರು.
ಅಲ್ಲದೆ, ಅಂಗವಿಕಲ ಹಕ್ಕುಗಳ ಕಾಯ್ದೆ ಪ್ರಕಾರ ರಾಜ್ಯ ಸಲಹಾ ಸಮಿತಿ ಅವಧಿ ಪೂರ್ಣಗೊಂಡಿದೆ. ಹೊಸದಾಗಿ ಸಮಿತಿ ರಚಿಸಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಶಿಷ್ಟ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ವ್ಯಾಪ್ತಿಗೆ ಬರುತ್ತದೆ. ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದರು.