Advertisement
ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಪಂಚಮಸಾಲಿ ಸಮುದಾಯದ ಶಾಸಕರು ಈ ವಿಚಾರವನ್ನು ಪ್ರಸ್ತಾಪಿಸಲಿದ್ದಾರೆ.
ಸೋಮವಾರ ಚರ್ಚೆ ಪ್ರಾರಂಭವಾಗುತ್ತಿದ್ದಂತೆ ಹಿಂದಿನ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಪ್ರಮಾಣಪತ್ರವನ್ನು ಉಲ್ಲೇಖಿಸಿದ್ದ ಸಿಎಂ ಸಿದ್ದರಾಮಯ್ಯ ಬೇಕಿದ್ದರೆ ಅದನ್ನು ಸದನದಲ್ಲಿ ಮಂಡಿಸುತ್ತೇನೆ ಎಂದು ಸವಾಲು ಹಾಕಿದ್ದರು. ಇದಕ್ಕೆ ತಿರುಗೇಟು ಕೊಟ್ಟಿದ್ದ ಡಾ| ಸಿ.ಎನ್. ಅಶ್ವಥ್ ನಾರಾಯಣ ಹಾಗೂ ಅರವಿಂದ ಬೆಲ್ಲದ್ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ಎಲ್ಲ ಅಂಶಗಳನ್ನು ಬಹಿರಂಗಗೊಳಿಸುವಂತೆ ಸವಾಲು ಹಾಕಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ದಾಖಲೆ ಮಂಡಿಸುವರೇ ಎಂಬ ಕುತೂಹಲ ಸೃಷ್ಟಿಯಾಗಿದೆ.
Related Articles
Advertisement
ನ್ಯಾಯಾಂಗ ತನಿಖೆ ನಡೆಯಲಿಪಂಚಮಸಾಲಿ ಸಮಾಜದ ಶಾಂತಿಯುತ ಪ್ರತಿಭಟನೆ, ಹೋರಾಟಗಾರರ ಮೇಲೆ ಸರಕಾರವು ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ. ಈ ಸಂಬಂಧ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು. ಲಾಠಿ ಪ್ರಹಾ ರ ದಿಂದ ಹೋರಾಟದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಲಿಂಗಾಯತ ಸಮುದಾಯಕ್ಕೆ ಸೇರಿದ ಪಂಚಮಸಾಲಿ ರೈತರು ಗಾಯಗೊಂಡಿದ್ದಾರೆ. ಸರ್ಕಾರದ್ದು ಸರ್ವಾಧಿಕಾರಿ ನಡೆ, ಪ್ರಜಾಪ್ರಭುತ್ವ ವಿರೋಧಿ ನಡೆ.
– ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ ಸ್ವಾಭಿಮಾನಕ್ಕೆ ಪೆಟ್ಟು
ಪಂಚಮಸಾಲಿ ಹೋರಾಟಗಾರರ ಮೇಲೆ ಬಿದ್ದ ಲಾಠಿ ಏಟು ಇಡೀ ಲಿಂಗಾಯತ ಸಮುದಾಯದ ಆತ್ಮಸಾಕ್ಷಿ ಹಾಗೂ ಸ್ವಾಭಿಮಾನಕ್ಕೆ ಕಾಂಗ್ರೆಸ್ ಸರ್ಕಾರ ಕೊಟ್ಟ ಕೊಡಲಿಪೆಟ್ಟಾಗಿದೆ. ಉತ್ತರ ಕರ್ನಾಟಕದಲ್ಲಿ ಸಮುದಾಯದ ಮತ ಪಡೆದು, ರಾಜ್ಯದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ, ಇಂದು ಲಿಂಗಾಯತರ ವಿರುದ್ಧವೇ ತಿರುಗಿ ಬಿದ್ದಿದೆ. ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ, ಈ ಕುಕೃತ್ಯದ ಕುರಿತು ಕನಿಷ್ಠ ವಿಷಾದವನ್ನೂ ವ್ಯಕ್ತಪಡಿಸಿಲ್ಲ.
– ಅರವಿಂದ ಬೆಲ್ಲದ್,
ವಿಧಾನಸಭೆ ವಿಪಕ್ಷದ ಉಪನಾಯಕ