Advertisement

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ​​​​​​​

06:25 AM Nov 20, 2018 | |

ಬೆಳಗಾವಿ: ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಡಿ.10ರಿಂದ 20ರ ವರೆಗೆ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಯಾವುದೇ ಅನಾನುಕೂಲವಾಗದಂತೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ರಮೇಶಕುಮಾರ ಹಾಗೂ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

Advertisement

ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾಪ ಅವಧಿಯನ್ನು ಇನ್ನೊಂದು ದಿನ ವಿಸ್ತರಿಸಲು ಸರ್ಕಾರಕ್ಕೆ ಪ್ರಸ್ತಾವ ಕಳಿಸಲಾಗಿದೆ. ಒಂದು ವೇಳೆ ಒಪ್ಪಿಗೆ ಸಿಕ್ಕರೆ ವಿಧಾನ ಮಂಡಲದ ಕಲಾಪಗಳು ನಡೆಯಲಿವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಚಲಿಗಾಲ ಅಧಿವೇಶನದ ಕಲಾಪಗಳು ಜನಪರವಾಗಿ, ಗೌರವಯುತವಾಗಿ ನಡೆಯಬೇಕು ಮತ್ತು ಗುಣಮಟ್ಟದ ಚರ್ಚೆ ನಡೆಯಬೇಕು ಎಂಬುದು ನಮ್ಮ ನಿಲುವು. ಇದರಲ್ಲಿ ಯಾವುದೇ ರಾಜಿ ಇಲ್ಲ. ಪರಿಣಾಮಕಾರಿಯಾಗಿ ಕಲಾಪ ನಡೆಯುವಂತೆ ನೋಡಿಕೊಳ್ಳಲಾಗುವುದು. ಹಾಜರಾತಿ, ಚರ್ಚೆ, ಸದನದಲ್ಲಿ ನಡತೆ ಸೇರಿ ಪ್ರತಿಯೊಂದರಲ್ಲೂ ಗುಣಾತ್ಮಕ ಬದಲಾವಣೆಗೆ ಪ್ರಯತ್ನಿಸಲಾಗುವುದು ಎಂದು ಸಭಾಧ್ಯಕ್ಷ ರಮೇಶಕುಮಾರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next