Advertisement
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಬಳಿಕ ಇದೇ ಮೊದಲ ಬಾರಿಗೆ ಚಳಿಗಾಲ ಅಧಿ ವೇಶನ ನಡೆಸುತ್ತಿರುವ ಮುಖ್ಯಮಂತ್ರಿಗಳಿಗೆ ಒಂದೆಡೆ ಕಲಾಪದಲ್ಲಿ ಪ್ರತಿಪಕ್ಷಗಳ ಸವಾಲಿಗೆ ಉತ್ತರಿಸುವ ತಲೆನೋವು, ಇನ್ನೊಂದೆಡೆ ವಿವಿಧ ಸಂಘ-ಸಂಸ್ಥೆಗಳ ಪ್ರತಿಭಟನೆ ಎದುರಿಸಬೇಕಾದ ಅನಿವಾರ್ಯತೆ ಬಂದಿದೆ. ಇದೆಲ್ಲ ಎದುರಿಸಿ 10 ದಿನಗಳ ಕಾಲ ಅಧಿವೇಶನ ಯಶಸ್ವಿಯಾಗಿ ನಡೆಸಬೇಕಾದ ಸವಾಲುಸರ್ಕಾರದ ಮುಂದಿದೆ. 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿವೆ.
Related Articles
Advertisement
ಕೋವಿಡ್ ಭೀತಿಯಿಂದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕೆಂಬ ನಿಯಮ ನೀಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ಪ್ರತಿಭಟನೆ ವೇಳೆ 500ಕ್ಕಿಂತ ಹೆಚ್ಚು ಜನರು ಸೇರಬಾರದು. ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿರಬೇಕೆಂಬ ವಿವಿಧ ನಿಯಮ ಹಾಕಲಾಗಿದೆ.
ರೈತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಲಿದ್ದು, ಕೊಂಡಸಕೊಪ್ಪ ಗ್ರಾಮದ ಬಳಿಯಿರುವವಿಶಾಲ ಜಾಗದಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರತಿಭಟನೆಗಳಿಗೂ ಕೊಂಡಸಕೊಪ್ಪದಲ್ಲಿಯೇ ವ್ಯವಸ್ಥೆ ಇದೆ. ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ ಬಳಿಯ ಜಾಗದಲ್ಲಿ ಅನೇಕ ಪ್ರತಿಭಟನೆಗಳು ನಡೆಯಲಿವೆ.
ಮೊದಲ ದಿನವೇ ಖಾನಾಪುರ ಶಾಸಕ ಡಾ| ಅಂಜಲಿ ನಿಂಬಾಳಕರ ಅವರು ಪಾದಯಾತ್ರೆ ಮೂಲಕ ಅಧಿ ವೇಶನಕ್ಕೆ ಆಗಮಿಸಲಿದ್ದಾರೆ. ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಪ್ರತಿಭಟನೆ ಇಲ್ಲ. ಆದರೆ ಕಾರ್ಯಕ್ರಮ ನಡೆಸಿ ಸರ್ಕಾರದ ಎದುರು ತಮ್ಮ ಬೇಡಿಕೆ ಮಂಡಿಸಲಿದೆ.
ಚಳಿಗಾಲ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಕೆಲ ದಿನಗಳ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸದ್ಯ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಪ್ರತಿಭಟಿಸಲು ಅನುಮತಿ ಕೋರಿವೆ. ಅಹಿತಕರ ಘಟನೆ ನಡೆಯದಂತೆ, ಕೋವಿಡ್ ನಿಯಮಾವಳಿಗಳನ್ನುಪಾಲಿಸಿಕೊಂಡು ಪ್ರತಿಭಟನೆ, ಧರಣಿ ನಡೆಸಬಹುದಾಗಿದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. – ಡಾ|ಕೆ.ತ್ಯಾಗರಾಜನ್, ಪೊಲೀಸ್ ಕಮೀಷನರ್
-ಭೈರೋಬಾ ಕಾಂಬಳೆ