Advertisement

ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

06:00 AM Oct 26, 2018 | Team Udayavani |

ಬೆಂಗಳೂರು: ಡಿಸೆಂಬರ್‌ ಮೊದಲ ಅಥವಾ ಎರಡನೇ ವಾರದಲ್ಲಿ ಬೆಳಗಾವಿಯಲ್ಲಿ ಸಮ್ಮಿಶ್ರ ಸರ್ಕಾರದ ಮೊದಲ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Advertisement

ಈ ಕುರಿತಂತೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಅಧಿಕೃತ ದಿನಾಂಕ ನಿಗದಿ ಮಾಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಸಂಪುಟ ಅಧಿಕಾರ ನೀಡಿದೆ.ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ಈ ಬಗ್ಗೆ ಮಾಹಿತಿ ನೀಡಿದರು.

ಸಂಪುಟದ ಪ್ರಮುಖ ನಿರ್ಣಯಗಳು: ನಗರ ಪ್ರದೇಶಗಳಲ್ಲಿ 17.50 ಕೋಟಿ ರೂ.ವೆಚ್ಚದಲ್ಲಿ 250 ಅಂಗನವಾಡಿ ಕೇಂದ್ರ ಆರಂಭಿಸಲು ತೀರ್ಮಾನ. ಶೂನ್ಯ ಬಂಡವಾಳ ಕೃಷಿ ಪದ್ದತಿ ಕುರಿತು ರೈತರಿಗೆ ತರಬೇತಿ ನೀಡಲು 50 ಕೋಟಿ ಬಿಡುಗಡೆಗೆ ಒಪ್ಪಿಗೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಹಿಳಾ ಸದಸ್ಯರ ನೇಮಕಕ್ಕೆ ಸಂಪುಟ ಒಪ್ಪಿಗೆ. ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಿಐಎಸ್‌ ಮಾದರಿಯಲ್ಲಿ ಆಸ್ತಿ ಮಾಹಿತಿ ಸಂಗ್ರಹಿಸಲು ನಿರ್ಧಾರ .ಕನಿಷ್ಠ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಿ ಪಡಿತರ ವ್ಯವಸ್ಥೆಯಲ್ಲಿ ಹಂಚಿಕೆ ಮಾಡುವ ತೀರ್ಮಾನಕ್ಕೆ ಘಟನೋತ್ತರ ಅನುಮೋದನೆ. ಕರ್ನಾಟಕ ಆಡಳಿತ ಮಂಡಳಿಗೆ ಸದಸ್ಯರ ನೇಮಕ ಮಾಡಲು ಒಪ್ಪಿಗೆ.

Advertisement

Udayavani is now on Telegram. Click here to join our channel and stay updated with the latest news.

Next