Advertisement

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

01:54 AM Jan 01, 2025 | Team Udayavani |

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ತಮ್ಮ ನಡುವೆ ನಡೆದಿದ್ದ ವಾಗ್ವಾದಕ್ಕೆ ಸಂಬಂಧಪಟ್ಟಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿ ದೌರ್ಜನ್ಯ ಎಸಗಿದ ಬೆಳಗಾವಿ ಪೊಲೀಸರ ವಿರುದ್ಧ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ (ಡಿಜಿಪಿ) ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮಂಗಳವಾರ ದೂರು ನೀಡಿದ್ದಾರೆ.

Advertisement

ಪರಿಷತ್‌ ಸದಸ್ಯರಾದ ಎನ್‌. ರವಿಕುಮಾರ್‌ ಹಾಗೂ ನವೀನ್‌ ಜತೆ ಡಿಜಿಪಿ ಅಲೋಕ್‌ ಮೋಹನ್‌ ಕಚೇರಿಗೆ ಭೇಟಿ ನೀಡಿದ ರವಿ, ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾದ ಎಲ್ಲ ವಿಚಾರಗಳನ್ನು ನಮೂದಿಸಿದ್ದಾರೆ.

ನಾನು ದೂರುಕೊಟ್ಟ ಬಳಿಕವೂ ಎಫ್ಐಆರ್‌ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ. ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next