Advertisement

ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ?

08:48 PM Nov 08, 2021 | Team Udayavani |

ನವದೆಹಲಿ : ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ ನಡೆಸಲು ರಾಜಕೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Advertisement

ಕಳೆದ ಒಂದೂವರೆ ವರ್ಷಗಳಲ್ಲಿ ನಡೆದ ಅಧಿವೇಶನಗಳಲ್ಲಿ ಹೇಗೆ ಎಲ್ಲ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತೋ, ಈ ಬಾರಿಯೂ ಅದೇ ಮಾದರಿಯಲ್ಲಿ ಅಧಿವೇಶನ ನಡೆಸಲಾಗುತ್ತದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಏಕಕಾಲಕ್ಕೆ ನಡೆಯಲಿದ್ದು, ಅಧಿವೇಶನದಲ್ಲಿ ಸುಮಾರು 20 ಸಿಟ್ಟಿಂಗ್‌ಗಳು ಇರಲಿವೆ ಎಂದೂ ಹೇಳಲಾಗಿದೆ.

ಮುಂದಿನ ವರ್ಷ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದಿದೆ. ಅಲ್ಲದೇ, ಹಣದುಬ್ಬರ, ತೈಲ ದರ ಏರಿಕೆ, ಖಾದ್ಯ ತೈಲದ ದರ ಹೆಚ್ಚಳ, ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ, ಲಖೀಂಪುರ ಖೇರಿ ಹಿಂಸಾಚಾರ, ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.

ಇದನ್ನೂ ಓದಿ : ಫ್ಲಾಯ್ಡ್ ಗೆ ಥಳಿಸಿದ ಮಾದರಿಯಲ್ಲಿ ವ್ಯಕ್ತಿಗೆ ಥಳಿತ

Advertisement

Udayavani is now on Telegram. Click here to join our channel and stay updated with the latest news.

Next