Advertisement

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

05:53 PM Nov 05, 2024 | Team Udayavani |

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್‌ 25ರಿಂದ ಆರಂಭಗೊಳ್ಳಲಿದ್ದು, ಡಿಸೆಂಬರ್‌ 25ರವರೆಗೆ ಕಲಾಪ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಂಗಳವಾರ (ನ.05) ಘೋಷಿಸಿದ್ದಾರೆ.‌

Advertisement

2024ರ ನವೆಂಬರ್‌ 25ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿರುವ ಸಂಸತ್‌ ಚಳಿಗಾಲದ ಉಭಯ ಅಧಿವೇಶನದ ಪ್ರಸ್ತಾಪಕ್ಕೆ ರಾಷ್ಟ್ರಪತಿ ಮುರ್ಮು ಅವರು ಅಂಗೀಕಾರ ನೀಡಿರುವುದಾಗಿ ರಿಜಿಜು ಎಕ್ಸ್‌ ನಲ್ಲಿ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ.

ಚಳಿಗಾಲದ ಕಲಾಪದಲ್ಲಿ ನವೆಂಬರ್‌ 26ರಂದು ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಸಂವಿಧಾನ ಸದನದ ಸೆಂಟ್ರಲ್‌ ಹಾಲ್‌ ನಲ್ಲಿ ನಡೆಸಲಾಗುವುದು ಎಂದು ಸಚಿವ ರಿಜಿಜು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ನವೆಂಬರ್‌ ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಪ್ರಸ್ತುತ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (JPC) ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಈ ಅಧಿವೇಶನದಲ್ಲೇ “ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next