Advertisement
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಯತ್ನಾಳ್, ಬೆಳಗಾವಿಯಲ್ಲಿ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 10 ಸಾವಿರ ರೂಪಾಯಿ ಬಹುಮಾನ ನೀಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿ ಪ್ರತಿಭಟನಾಕಾರರ ಹತ್ತಿಕ್ಕಲು ಖುದ್ದು ಎಡಿಜಿಪಿ ಶ್ರೇಣಿಯ ಅಧಿಕಾರಿಗಳೇ ಫೀಲ್ಡ್ ಗೆ ಇಳಿದಿದ್ದು, ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿ ನೀಡಿದ್ದರು ಎಂದು ಕಿಡಿಕಾರಿದ್ದಾರೆ.
ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸುವುದಿಲ್ಲ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರಿಗೆ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ. ಬಹುಮಾನ ನೀಡಿದ್ದಾರೆ. ಇನ್ಸ್ಪೆಕ್ಟರ್ ಗಡ್ಡೇಕರ ಹಾಗೂ ಐಪಿಎಸ್ ಅಧಿಕಾರಿ ಹಿತೇಂದ್ರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು ಎಂದು ಶಾಸಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.