Advertisement

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

10:52 PM Dec 22, 2024 | Team Udayavani |

ಬೆಂಗಳೂರು: ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆ ಮಾಡಿದ್ದಕ್ಕೆ ನಗರದ ಸೆನ್‌ ಠಾಣೆಯ ಇನ್‌ಸ್ಪೆಕ್ಟರ್‌ ಬಿ.ಆರ್‌.ಗಡ್ಡೇಕರ್‌ರಿಗೆ 10 ಸಾವಿರ ರೂ. ನಗದು ಬಹುಮಾನವನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಅಲೋಕ್‌ ಮೋಹನ್‌ ಘೋಷಿಸಿದ್ದಾರೆ. ಇದಕ್ಕೆ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ (ಎಕ್ಸ್‌) ಮಾಡಿರುವ ಯತ್ನಾಳ್, ಬೆಳಗಾವಿಯಲ್ಲಿ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 10 ಸಾವಿರ ರೂಪಾಯಿ ಬಹುಮಾನ ನೀಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿ ಪ್ರತಿಭಟನಾಕಾರರ ಹತ್ತಿಕ್ಕಲು ಖುದ್ದು ಎಡಿಜಿಪಿ ಶ್ರೇಣಿಯ ಅಧಿಕಾರಿಗಳೇ ಫೀಲ್ಡ್ ಗೆ ಇಳಿದಿದ್ದು, ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿ ನೀಡಿದ್ದರು ಎಂದು ಕಿಡಿಕಾರಿದ್ದಾರೆ.

ಪಂಚಮಸಾಲಿಗಳು ಎಂದಿಗೂ ಕ್ಷಮಿಸುವುದಿಲ್ಲ: 
ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸುವುದಿಲ್ಲ. ಬೆಳಗಾವಿ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಆರ್.ಗಡ್ಡೇಕರಿಗೆ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ. ಬಹುಮಾನ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಗಡ್ಡೇಕರ ಹಾಗೂ ಐಪಿಎಸ್ ಅಧಿಕಾರಿ ಹಿತೇಂದ್ರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು ಎಂದು ಶಾಸಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next