Advertisement
ನಗರದ ರಾಜಾಪುರ ರಾಮಕೃಷ್ಣ ವಿವೇಕಾನಂದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಸ್ವಾಮಿ ವಿವೇಕಾನಂದರ 155ನೇ ಜನ್ಮ ದಿನಾಚರಣೆ ಮತ್ತು ಯುವ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಮುಖ್ಯ. ಕಠಿಣ ಪರಿಶ್ರಮದಿಂದ ಜೀವನದಲ್ಲಿ ಛಲ ಸಾಧಿಸಬೇಕು. ಬೇರೆಯವರೊಂದಿಗೆ ಅನ್ಯೋನ್ಯತೆ,ಗೌರವದಿಂದ ನಡೆದುಕೊಂಡು ಸಾಮರಸ್ಯದ ಜೀವನ ಸಾಗಿಸಬೇಕು ಎಂದರು.
ರಾಜಮಾರ್ಗ, ಮೈ ಮೆಜೆಸ್ಟಿ ಎಂಬ ಗ್ರಂಥಗಳನ್ನು ರಚಿಸಿದ್ದಾರೆ. ಅವುಗಳನ್ನು ಓದಬೇಕು ಎಂದರು. ಮಾನವನ ಉದ್ಧಾರಕ್ಕಾಗಿ ಧರ್ಮ ಸ್ಥಾಪನೆಯಾಗಿದೆ. ಜೀವನದಲ್ಲಿ ಸರಿಯಾದ ಮಾರ್ಗದ ಮೇಲೆ ನಡೆಯುವ ಸಂಕಲ್ಪ ಮಾಡಬೇಕು. ಸ್ವಾಭಿಮಾನ, ನೆಮ್ಮದಿ, ಸುಖ, ಶಾಂತಿ ತರಲು ವಿವೇಕಾನಂದ ಅವರಂತಹ ಮಹಾನ್
ವ್ಯಕ್ತಿಗಳ ಜೀವನ ಚರಿತ್ರೆ ಅರಿಯಬೇಕು. ಎಲ್ಲರೂ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಹೇಳಿದರು.
Related Articles
Advertisement
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ರಾಜಾಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಮಹೇಶ್ವರಾನಂದಜಿ ಮಹಾರಾಜ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ| ಸಿ.ಪಿ. ಬಹ್ಮನಪಾಡ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿ ನಾಡಿಗೇರ ಮತ್ತಿತರರು ಪಾಲ್ಗೊಂಡಿದ್ದರು.