Advertisement

ಕಳೆದ ಎರಡು ತಿಂಗಳ ಬಳಿಕ ದೇಶದಲ್ಲಿ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ, 2427 ಸಾವು

10:33 AM Jun 07, 2021 | Team Udayavani |

ನವದೆಹಲಿ:ಭಾರತದಲ್ಲಿ ಸತತವಾಗಿ ಕೋವಿಡ್ ಎರಡನೇ ಅಲೆ ಇಳಿಕೆಯಾಗುತ್ತಿದ್ದು, ಕಳೆದ ಎರಡು ತಿಂಗಳ ಬಳಿಕ ಭಾರೀ ಪ್ರಮಾಣದಲ್ಲಿ ಇಳಿಕೆಗೆ ಸಾಕ್ಷಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 07) ಬಿಡುಗಡೆಗೊಳಿಸಿದ ಅಂಕಿ ಅಂಶದ ಪ್ರಕಾರ, ಕಳೆದ 24ಗಂಟೆಗಳಲ್ಲಿ 1,00,636 ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದೆ.

Advertisement

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 2,427 ಮಂದಿ ಸಾವನ್ನಪ್ಪಿದ್ದಾರೆ. ಅಂಕಿಅಂಶದ ಪ್ರಕಾರ, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,01,609ಕ್ಕೆ ಇಳಿಕೆಯಾಗಿದೆ. ಅಲ್ಲದೇ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 80,745ಕ್ಕೆ ಇಳಿದಿದೆ ಎಂದು ವಿವರಿಸಿದೆ.

ಸತತವಾಗಿ ಕಳೆದ 11 ದಿನಗಳಿಂದ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಪ್ರಕರಣ ವರದಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,427 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ 3,49,186ಕ್ಕೆ ಏರಿಕೆಯಾಗಿದೆ.
Updated…

Advertisement

Udayavani is now on Telegram. Click here to join our channel and stay updated with the latest news.

Next