Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,041 ಕೋವಿಡ್ ಪ್ರಕರಣ ಪತ್ತೆ, 29,621 ಮಂದಿ ಗುಣಮುಖ

10:41 AM Sep 27, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,041 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 29,621 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ 276 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 27) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಸ್ಟಾರ್‌ ಸಿನಿಮಾಗಳ ಅಬ್ಬರ ಶುರು: ಒಂದೇ ದಿನ ಎರಡು ಸ್ಟಾರ್‌ ಸಿನಿಮಾ; ‘ಸ್ಟಾರ್‌ವಾರ್‌ ಅಲ್ಲ ‘

ಕೋವಿಡ್ ಎರಡನೇ ಅಲೆ ಇಳಿಮುಖವಾಗುತ್ತಿರುವ ಸಂದರ್ಭದಲ್ಲಿ ಕೇರಳದಲ್ಲಿ ಮಾತ್ರ ಕೋವಿಡ್ ಪ್ರಕರಣ ಹೆಚ್ಚಳವಾಗಿದೆ. ಕೇರಳದಲ್ಲಿ 15, 951 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 165 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,36,78,786ಕ್ಕೆ ತಲುಪಿದ್ದು, ಈವರೆಗೆ 3,29,31,972 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 4,47,194ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,99,620ಕ್ಕೆ ಇಳಿಕೆಯಾಗಿದ್ದು, ಇದು 191 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next