Advertisement

ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 28,591 ಕೋವಿಡ್ ಪ್ರಕರಣ ಪತ್ತೆ

10:04 AM Sep 12, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 28,591 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಶನಿವಾರಕ್ಕಿಂತ (ಸೆ.11) ಶೇ.14.3ರಷ್ಟು ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ (ಸೆಪ್ಟೆಂಬರ್ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,32,36,921ಕ್ಕೆ ಏರಿಕೆಯಾಗಿದೆ. ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ
ಸಂಖ್ಯೆ ಕಳೆದ 24ಗಂಟೆಗಳಲ್ಲಿ 6,595ರಷ್ಟು ಇಳಿಕೆಯಾಗಿದೆ. ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,84,921ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 338 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಸಾವನ್ನಪ್ಪಿರುವವರ ಸಂಖ್ಯೆ 4,42,655ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 34,848 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಪ್ರಮಾಣ 3,24,09,345ಕ್ಕೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next