Advertisement

ಭಾರತದಲ್ಲಿ ಕೋವಿಡ್ ಪ್ರಕರಣದಲ್ಲಿ ಅಲ್ಪ ಪ್ರಮಾಣದ ಇಳಿಕೆ, 3.23 ಲಕ್ಷ ಪ್ರಕರಣ ಪತ್ತೆ

10:33 AM Apr 27, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಕೋವಿಡ್ ಪ್ರಕರಣದಲ್ಲಿ ಕಳೆದ 24ಗಂಟೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಮಂಗಳವಾರ(ಏ.27) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿ ಅಂಶದಲ್ಲಿ 3.23 ಲಕ್ಷ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಅಲ್ಲದೇ 2,771 ಮಂದಿ ಸಾವನ್ನಪ್ಪಿರುವುದಾಗಿ ತಿಳಿಸಿದೆ.

Advertisement

ಇದನ್ನೂ ಓದಿ:ಮೊದಲು ಊರು ಸೇರೋಣ..! ಬೆಂಗಳೂರಿನಿಂದ ಹೊರಡುತ್ತಿದ್ದಾರೆ ಸಾವಿರಾರು ಜನ

ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1.76ಕೋಟಿಗೆ ಏರಿಕೆಯಾಗಿದ್ದು, ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 1.97 ಲಕ್ಷಕ್ಕೆ ಹೆಚ್ಚಳವಾಗಿದೆ. ಸುಮಾರು ಐದು ರಾಜ್ಯಗಳಲ್ಲಿ ಶೇ.47.67ರಷ್ಟು ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಶೇ.15.07ರಷ್ಟು ಹೊಸ ಪ್ರಕರಣಗಳು ವರದಿಯಾಗಿದೆ.

ಕಳೆದ 24ಗಂಟೆಗಳಲ್ಲಿ ಒಟ್ಟು 2,51,827 ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 28,82,204ಕ್ಕೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಮಾಣದ ಸಾವಿನ ಸಂಖ್ಯೆ(524) ವರದಿಯಾಗಿದ್ದು, ದೆಹಲಿಯಲ್ಲಿ 380 ಮಂದಿ ಕಳೆದ 24ಗಂಟೆಗಳಲ್ಲಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ. ಈವರೆಗೆ ದೇಶದಲ್ಲಿ ಒಟ್ಟು 28, 09,79,877 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next