ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಆಗಸ್ಟ್ 09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಂಚೆ ಅಣ್ಣನ ಆನ್ ಲೈನ್‌ನಲ್ಲಿ ಬಣ್ಣ ಬಣ್ಣದ ರಾಖೀಗಳು: ರಾಖೀಪೋಸ್ಟ್ ಆನ್‌ಲೈನ್ ಸೇವೆ ಆರಂಭ
ಕಳೆದ 24ಗಂಟೆಗಳಲ್ಲಿ 4,634 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುವುದರೊಂದಿಗೆ, ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,02,188ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕಳೆದ ಒಂದು ದಿನದಲ್ಲಿ ಕೋವಿಡ್ ನಿಂದ 447 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 39,686 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 4,28,309ಕ್ಕೆ ಏರಿಕೆಯಾಗಿದೆ. ಈವರೆಗೆ ದೇಶದಲ್ಲಿ ಕೋವಿಡ್ ನಿಂದ 3.11 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ.