ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಶನಿವಾರ(ಜೂನ್ 05) ಕೋವಿಡ್ 19 ಸೋಂಕು ಪ್ರಕರಣ 500ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪತ್ತೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 414 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್ಎಸ್ಎಲ್ ಸಿ ಅಂಕವೂ ಪರಿಗಣನೆ: ಸುರೇಶ್ ಕುಮಾರ್
ದೆಹಲಿಯಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 6,731ಕ್ಕೆ ಇಳಿಕೆಯಾಗಿದೆ. ಅಲ್ಲದೇ ಪಾಸಿಟಿವಿಟಿ ದರ ಕೂಡಾ 0.53ಕ್ಕೆ ಇಳಿಕೆಯಾಗಿದೆ. ದೆಹಲಿಯಲ್ಲಿ ಈವರೆಗೆ ಒಟ್ಟು 14,28,863 ಕೋವಿಡ್ ಪ್ರಕರಣಗಳು ವರದಿಯಾಗಿದೆ.
ಕಳೆದ 24ಗಂಟೆಗಳಲ್ಲಿ ದೆಹಲಿ ನಗರದಲ್ಲಿ 60 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 24,557ಕ್ಕೆ ತಲುಪಿದೆ. ಅಂದಾಜು 77,694 ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಇದರಲ್ಲಿ 22,059 ರಾಪಿಡ್ ಆ್ಯಂಟಿಜೆನ್ ಮತ್ತು 55,635 ಆರ್ ಟಿಪಿಸಿಆರ್ ಪರೀಕ್ಷೆ ಎಂದು ತಿಳಿಸಿದೆ.
ಕಳೆದ 24ಗಂಟೆಗಳಲ್ಲಿ ದೆಹಲಿ ಆಸ್ಪತ್ರೆಗಳಲ್ಲಿ ಒಟ್ಟು 1683 ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ ಚೇತರಿಕೆಯ ದರ ಶೇ.97.81ಕ್ಕೆ ಏರಿಕೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.