Advertisement

ಕೋವಿಡ್ ಹೆಚ್ಚಳ ಕಳವಳಕಾರಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 43,654 ಪ್ರಕರಣ ಪತ್ತೆ

10:53 AM Jul 28, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 43,654 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 640 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜುಲೈ28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಬಿಎಸ್‌ವೈ ಸಂವಹನಕಾರನಿಗೆ ಒಲಿದ ಸಿಎಂ ಪಟ್ಟ!

ಕಳೆದ ಮೂರು ವಾರಗಳ ಬಳಿಕ ಕೋವಿಡ್ ಪ್ರಕರಣದಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 41,678 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 3,06,63,147 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶದಲ್ಲಿ ವಿವರಿಸಲಾಗಿದೆ.

ಕೇರಳದಲ್ಲಿ ಇನ್ನೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, 22,129 ಪ್ರಕರಣಗಳು ವರದಿಯಾಗಿದೆ. ಕಳೆದ ಎರಡು ತಿಂಗಳ ಗರಿಷ್ಠ ಪ್ರಮಾಣವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,99,436ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1.45ಲಕ್ಷಕ್ಕೆ ಹೆಚ್ಚಳವಾಗಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ ಸೋಂಕಿನಿಂದ ದೇಶದಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 4,22,022ಕ್ಕೆ ಏರಿಕೆಯಾಗಿದೆ. ದೇಶದ 7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಆತಂಕ ವ್ಯಕ್ತಪಡಿಸಿತ್ತು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next