Advertisement

ಚಂದ್ರಬಾಬು ನಾಯ್ಡು ದೇಶದ ಸಿರಿವಂತ ಸಿಎಂ

09:22 AM Feb 14, 2018 | Harsha Rao |

ಹೊಸದಿಲ್ಲಿ: ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಶನ್‌ ಆಫ್ ಡೆಮಾಕ್ರಾಟಿಕ್‌ ರಿಫಾಮ್ಸ್‌ ಬಿಡುಗಡೆ ಮಾಡಿದ್ದು, ಅದರಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು 177 ಕೋಟಿ ರೂ.ಮೌಲ್ಯದ ಆಸ್ತಿ ಹೊಂದಿರುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 13.61 ಕೋಟಿ ರೂ.ಮೌಲ್ಯದ ಆಸ್ತಿ ಹೊಂದುವ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 6ನೇ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅರುಣಾಚಲ ಸಿಎಂ ಪೆಮಾ ಖಂಡು ಇದ್ದಾರೆ. ಅವರ ಆಸ್ತಿ ಮೌಲ್ಯ 129 ಕೋಟಿ ರೂ.  ತ್ರಿಪುರಾ ಸಿಎಂ ಮಾಣಿಕ್‌ ಸರ್ಕಾರ್‌ 26 ಲಕ್ಷ ರೂ.ಮೌಲ್ಯದ ಆಸ್ತಿ ಹೊಂದಿದ್ದಾರೆ. ಪಂಜಾಬ್‌ ಸಿಎಂ ಅಮರೀಂದರ್‌ ಸಿಂಗ್‌ 48 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 

Advertisement

ಇನ್ನು ಗಂಭೀರ ಪ್ರಕರಣಗಳು ಹೆಚ್ಚು ದಾಖಲಾಗಿರುವ ಮುಖ್ಯಮಂತ್ರಿಗಳ ಪೈಕಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವೀಸ್‌ ಮೊದಲ ಸ್ಥಾನದಲ್ಲಿದ್ದಾರೆ. ಅವರ ವಿರುದ್ಧ 21 ಕೇಸುಗಳಿವೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ 11, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ವಿರುದ್ಧ 10 ಕೇಸುಗಳಿವೆ. 31 ಮುಖ್ಯಮಂತ್ರಿಗಳ ಪೈಕಿ 20 ಮಂದಿಯ ಹಿನ್ನೆಲೆ ಉತ್ತಮವಾಗಿದೆ ಎಂದು ಎಡಿಆರ್‌ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next