Advertisement

ಕೋವಿಡ್ ಹೆಚ್ಚಳ ಹಿನ್ನೆಲೆ: ಹೋಳಿ ಆಚರಣೆಗೆ ನಿರ್ಬಂಧ ಹೇರಿದ ಒಡಿಶಾ ಸರ್ಕಾರ

08:19 PM Mar 21, 2021 | Team Udayavani |

ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮುಂಬರುವ ಹೋಳಿ ಆಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಿದೆ.

Advertisement

ಮುಂದಿನ ಮಾರ್ಚ್ 28 ಮತ್ತು 29 ರಂದು ನಡೆಯಲಿರುವ ಹೋಳಿ ಆಚರಣೆಯನ್ನು ಸಾರ್ವಜನಿಕವಾಗಿ ಆಚರಿಸದಂತೆ ಆದೇಶವನ್ನು ಹೊರಡಿಸಿದ್ದು, ಜನರು ಹೋಳಿ ಆಚರಣೆಯನ್ನು ಮಾಡಲು ಬಯಸಿದರೆ ತಮ್ಮ ಕುಟುಂಬ ಸದಸ್ಯರ ಜೊತೆ ಮಾತ್ರ ಮಾಡಬೇಕೆ ಹೊರತು ಯಾವುದೇ ಸಾರ್ವಜನಿಕ ಪ್ರದೇಶಗಳು ಅಥವಾ ಸಾರ್ವಜನಿಕ ರಸ್ತೆಗಳಲ್ಲಿ ಮಾಡುವಂತಿಲ್ಲ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

ಇದನ್ನೂ ಓದಿ:ಹಣ ನುಂಗುತ್ತಿರುವ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಕೊನೆಗಾಣಿಸಲಿ: HDK

ದೋಲಾ ಜಾತ್ರೆ ಆಚರಣೆಗೆ ಸಂಬಂಧಿಸಿರುವ ಸಭೆಗಳು ಹಾಗೂ ಇತರೆ ದಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿರುವ ಸಭೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುವನ್ನು ನಿರ್ಬಂಧಿಸಲಾಗಿದೆ ಎಂದಿರುವ SRC (Special Relief Commissioner) ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದರ ಮೂಲಕ ಎಂದಿನಂತೆ ಪೂಜಾ ಕಾರ್ಯಗಳನ್ನು ನಡೆಸಬಹುದು.  ಆದರೆ  ಆಯಾ ಪ್ರದೇಶಗಳ ಪರಿಸ್ಥಿತಿಗಳಿಗೆ ಅನುಗುಣವಾಗಿ ಪುರಸಭೆ ಆಯುಕ್ತರನ್ನು ಒಳಗೊಂಡಂತೆ ನಿಯೋಜಿತ ಅಧಿಕಾರಿಗಳು ದೇವಾಲಯದ ಪೂಜಾ ಕಾರ್ಯಗಳಲ್ಲಿ  ಎಷ್ಟು ಜನ ಭಕ್ತರು ಪಾಲ್ಗೊಳ್ಳಬಹುದು ಎಂಬುದನ್ನು ನಿರ್ಧರಿಸುವಂತೆ ತಿಳಿಸಲಾಗಿದೆ.

ಈ ನಡುವೆ ಆಡಳಿತಕ್ಕೆ ಸಂಬಂಧಿಸಿರುವ ಎಲ್ಲಾ ವಿಧವಾದ ಸಭೆ ಹಾಗೂ ಮಾತುಕತೆಗಳನ್ನು ವರ್ಚುವಲ್ ಮಾದರಿಯಲ್ಲಿ ನಡೆಸುವಂತೆ ತಿಳಿಸಿದ್ದು, ಮುಂದಿನ ಆದೇಶದವರೆಗೆ ಎಲ್ಲಾ ಅಧಿಕಾರಿಗಳು ವರ್ಚುವಲ್ ಮಾದರಿಯಲ್ಲಿಯೇ ಸಭೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಒಂದು ವೇಳೆ ನೇರ ಸಭೆಗಳನ್ನು ಮಾಡಲೇ ಬೇಕಾದ ಅನಿವಾರ್ಯತೆಗಳಿದ್ದರೆ, ಅಂತಹ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆಯನ್ನು ಮಾಡಬೇಕು ಎಂದು ಸಾಮಾನ್ಯ ಆಡಳಿತ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆ ಆದೇಶ  ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next