ಮೈಸೂರು: ದುರಾಡಳಿತ ನಡೆಸುತ್ತಿರುವ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರನ್ನು ಸೇವೆಯಿಂದ ವಜಾಗೊಳಿಸಿ, ಅವರ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಶುಕ್ರವಾರ ಮಾನಸಗಂಗೋತ್ರಿ ರೌಂಡ್‌ಕಾಂಟೀನ್ ಬಳಿ ಪ್ರತಿಭಟನೆ ನಡೆಸಿದರು.
Advertisement
ಮೈಸೂರು ವಿವಿ ಕುಲಸಚಿವರಾಗಿ ನೇಮಕಗೊಂಡ ದಿನದಂದಲೂ ದಲಿತ ವರ್ಗದ ಮೇಲೆ ಪಿತೂರಿ ನಡೆಸುತ್ತಿದ್ದು, ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ಕುಲಸಚಿವರಾಗಿ ನೇಮಕಗೊಂಡ ಸಂದರ್ಭದಲ್ಲಿ ತಮ್ಮ ಕಾರ್ಯಾಲಯದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿದರು.
Related Articles
Advertisement
ರೈತ, ಕಾರ್ಮಿಕ ಬೇಡಿಕೆಗಳ ಈಡೇರಿಕೆಗೆ ಸಿಪಿಐ ಪ್ರತಿಭಟನೆ ಮೈಸೂರು: ರೈತರ ಸಾಲ ಮನ್ನಾ ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಗಾಂಧಿಚೌಕದಲ್ಲಿ ಪ್ರತಿಭಟನೆ ನಡೆಸಿದರು.ಬರಗಾಲದಿಂದ ರೈತರು ಕಂಗಾಲಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಎದುರಾಗಿದೆ. ಅಪನಗದೀ ಕರಣದಿಂದಾಗಿ ರೈತರಿಗೆ ಅಂದಾಜು 25 ಸಾವಿರ ಕೋಟಿ ರೂ. ನಷ್ಟವಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ. ಮಕೇಂದ್ರ ಸರ್ಕಾರ ಅಂಗನವಾಡಿ, ಬಿಸಿಯೂಟ, ಆಶಾ ಇತ್ಯಾದಿ ಕೇಂದ್ರದ ಯೋಜನೆ ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಜಾರಿಗೊಳಿಸಿಲ್ಲ.ರಾಜ್ಯ ಸರ್ಕಾರ ನಿಗದಿ ಮಾಡಿರುವ 10,500 ರೂ. ಕನಿಷ್ಠ ವೇತನವನ್ನು ಕಾರ್ಮಿಕರಿಗೆ ನೀಡುತ್ತಿಲ್ಲ. ಸರ್ಕಾರ ನಿಗದಿಗೊಳಿಸಿರುವ ಮಾಸಿಕ 18 ಸಾವಿರವನ್ನು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಜಾರಿಗೊಳಿಸಬೇಕು. ಸರೋಜಿನಿ ಮಹಿಷಿ ವರದಿಗೆ ಪರಿಷ್ಕೃತ ಶಿಫಾರಸು ಮಾಡಿರುವ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸಮಿತಿ ವರದಿಯನ್ನು ಅಂಗೀಕರಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ಶೇ.35 ಹುದ್ದೆಗಳು ಖಾಲಿ ಇದ್ದು ಇದರ ನೇಮಕಕ್ಕೆ ಮುಂದಾಗಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಸಹ ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ ಇತರರು ಭಾಗವಹಿಸಿದ್ದರು.