Advertisement

ನಿತೀಶ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌: ಎಚ್‌ಎಎಂ ಅಧಿಕೃತ ಘೋಷಣೆ

08:50 PM Jun 19, 2023 | Team Udayavani |

ಪಾಟ್ನಾ: ಬಿಹಾರದ ನಿತೀಶ್‌ ಕುಮಾರ್‌ ನೇತೃತ್ವದ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವ ಕುರಿತು ಹಿಂದೂಸ್ತಾನಿ ಅವಾಮ್‌ ಮೋರ್ಚಾ(ಎಚ್‌ಎಎಂ) ಸೋಮವಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್‌ ರಾಮ್‌ ಮಾಂಜಿ ಅವರು ಎಚ್‌ಎಎಂ ಪಕ್ಷದ ಸಂಸ್ಥಾಪಕರು.

Advertisement

“ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸು ಪಡೆದ ಕುರಿತ ಪತ್ರ ಸಲ್ಲಿಸಲು ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೆಕರ್‌ ಅವರ ಸಮಯ ಕೇಳಲಾಗಿದೆ,’ ಎಂದು ಮಾಂಜಿ ಅವರ ಪುತ್ರ, ಎಚ್‌ಎಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಂತೋಷ್‌ ಸುಮನ್‌ ತಿಳಿಸಿದ್ದಾರೆ.

ಕಳೆದ ವಾರ ಸಚಿವ ಸ್ಥಾನಕ್ಕೆ ಸುಮನ್‌ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ ಜೆಡಿಯು ಪಕ್ಷದೊಂದಿಗೆ ಎಚ್‌ಎಎಂ ಪಕ್ಷವನ್ನು ವಿಲೀನಗೊಳಿಸುವಂತೆ ನಿತೀಶ್‌ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು. “ಪಕ್ಷದ ಭವಿಷ್ಯದ ದೃಷ್ಟಿಯಿಂದ ಎಲ್ಲಾ ನಾಯಕರೊಂದಿಗೆ ಸಮಾಲೋಚಿಸಿ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸು ಪಡೆಯಲು ನಿರ್ಧರಿಸಲಾಯಿತು,’ ಎಂದು ಸುಮನ್‌ ಹೇಳಿದ್ದಾರೆ.

ಇನ್ನೊಂದೆಡೆ, ಮಾಂಜಿ ಮತ್ತು ಸುಮನ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next