ಪಣಜಿ: ರಾಜ್ಯದಲ್ಲಿ ಮುಂಬರುವ 8 ರಿಂದ 10 ದಿನಗಳಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಕೋವಿಡ್ ರಣಕೇಕೆ…ಉತ್ತರಪ್ರದೇಶದಿಂದ ಗಂಗಾನದಿ ತೀರದತ್ತ ತೇಲಿಬಂದ 40ಕ್ಕೂ ಅಧಿಕ ಶವಗಳು!
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಾವಂತ್, ಕೋವಿಡ್ ಸೋಂಕಿತರು ಸೋಂಕಿನ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಯಲ್ಲಿ ಸಮಯೋಚಿತ ವೈದ್ಯಕೀಯ ಸಹಾಯ ಪಡೆದುಕೊಳ್ಳಬೇಕು. ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಲ್ಲ ಎಂದರು.
ಇನ್ನು, ರೋಗಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ವಿನಮ್ರವಾಗಿ ಜನತೆಯಲ್ಲಿ ಮನವಿ ಮಾಡುತ್ತೇನೆ. ಸೋಂಕಿನ ಲಕ್ಷಣಗಳಿರುವವರು ಚಿಕಿತ್ಸೆ ಪಡೆದುಕೊಳ್ಳಲು ವಿಳಂಬ ಮಾಡುವುದರಿಂದ ಸೋಂಕಿತರು ಗುಣಮುಖರಾಗುವ ಸಾಧ್ಯತೆ ಕಡಿಮೆಯಿರುತ್ತದೆ. ಹಾಗಾಗಿ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆಗೆ ಒಳಗಾಗಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ತಪ್ಪಿದ ಆಕ್ಸಿಜನ್ ದುರಂತ: ಜಿಲ್ಲಾಡಳಿತದ ಸಮಯಪ್ರಜ್ಞೆಯಿಂದ ಉಳಿಯಿತು ನೂರಾರು ಜೀವ