Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಅರಿವು ಮೂಡಿಸಿ: ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳು ನಿಗದಿತ ಸಮಯದ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಅನುದಾನದ ಬಗ್ಗೆ ಸಾಕಷ್ಟು ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಅಂಗವಿಕಲರಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಕುರಿತು ಜಿಲ್ಲೆಯಾದ್ಯಂತ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಧಾನಮಂತ್ರಿ ಭೇಟಿ: ಮುಂದಿನ ತಿಂಗಳು ಪ್ರಧಾನಮಂತ್ರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕೇಂದ್ರದ ಎಲ್ಲಾ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಎಲ್ಲಾ ಅರ್ಹರಿಗೆ ಪಡಿತರ ಚೀಟಿ ಮತ್ತು ಆಯುಷ್ಮಾನ್ ಆರೋಗ್ಯ ಕಾರ್ಡ್ ಈ ತಿಂಗಳ ಅಂತ್ಯದ ಒಳಗಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಗ್ರಾಮ ಒನ್ ಸೇವೆ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲು ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಪ್ರತಿಯೊಬ್ಬರಿಗೂ ನಿವೇಶನ: ಗ್ರಾಮೀಣ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನಗಳನ್ನು ಸಿದ್ಧಪಡಿಸಿ ನೀಡಬೇಕು. ಪ್ರತಿಯೊಬ್ಬ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಲು ನಿವೇಶನ ಒದಗಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.