Advertisement
ಶೇಷಾದ್ರಿಪುರ ನಿವಾಸಿಗಳಾದ ಜಗನ್ನಾಥ್ (28) ಮತ್ತು ತೇಜಸ್ (21) ಬಂಧಿತರು. ಕಣ್ಣನ್ ಎಂಬಾತ ತಲೆಮರೆಸಿ ಕೊಂಡಿದ್ದಾನೆ.
ಆರೋಪಿ ಯುವಕರು 3 ಬೈಕ್ಗಳಲ್ಲಿ ಹೊಸೂರಿನಲ್ಲಿರುವ ಫಾಲ್ಸ್ಗೆ ಹೋಗಿ ರವಿವಾರ ರಾತ್ರಿ 8 ಗಂಟೆ ಸುಮಾರಿಗೆ ನಗರಕ್ಕೆ ಮರಳುತ್ತಿದ್ದರು. ಇದೇ ವೇಳೆ ಸೇಂಟ್ ಜಾನ್ ಆಸ್ಪತ್ರೆಯಿಂದ ಮಹಿಳೆ ಹಾಗೂ ಆಕೆಯ ಪತಿ ಕೋರಮಂಗಲ ಕಡೆಯಿಂದ ಮಡಿವಾಳ ಕಡೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗ ಮಧ್ಯೆ ಕಾರು ಚಾಲಕ ಯಾವುದೇ ಸೂಚನೆ ನೀಡದೆ(ಇಂಡಿಕೇಟರ್) ಎಡ ತಿರುವು ಪಡೆದುಕೊಂಡಿದ್ದು, ಆರೋಪಿಗಳ ಬೈಕ್ಗೆ ಡಿಕ್ಕಿ ಹೊಡೆದಿದ್ದರು. ಅದರಿಂದ ಕೋಪಗೊಂಡ ಯುವಕರು ಇಂಡಿಕೇಟರ್ ಹಾಕಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
Related Articles
Advertisement
ಯುವಕರು ಬಂದು ಅನುಚಿತವಾಗಿ ವರ್ತಿಸುತ್ತಿದ್ದರಿಂದ ಗಾಬರಿಗೊಂಡ ಮಹಿಳೆ ಮೊಬೈಲ್ನಲ್ಲಿ ಯುವಕರ ಪುಂಡಾಟ ಸೆರೆ ಹಿಡಿದುಕೊಂಡಿದ್ದರು.
ವೀಡಿಯೋದಾ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರ ವಿಳಾಸ ಪತ್ತೆ ಹಚ್ಚಿ ಬಂಧಿಸಲಾಗಿದೆ. ಈ ಪೈಕಿ ಜಗನ್ನಾಥ್ ಕಾಲ್ ಸೆಂಟರ್ ಉದ್ಯೋಗಿ ಹಾಗೂ ತೇಜಸ್ ಶೇಷಾದ್ರಿಪುರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಾನೆ. ತಲೆಮರೆಸಿಕೊಂಡಿರುವ ಕಣ್ಣನ್ ಮನೆಗಳಿಗೆ ಪೇಪರ್ ಹಾಕುತ್ತಾನೆ ಎಂದು ಪೊಲೀಸರು ಹೇಳಿದರು.
“ಚಾಲಕ ಮಧ್ಯದ ಬೆರಳು ತೋರಿಸಿ ಅವಮಾನಿಸಿದ್ದಕ್ಕೆ ಹಿಂಬಾಲಿಸಿದೆವು’ಕಾರು ಚಾಲಕ ಯಾವುದೇ ಸೂಚನೆ ನೀಡದೇ ಏಕಾಏಕಿ ಎಡತಿರುವು ಪಡೆದುಕೊಂಡು, ಬೈಕ್ಗೆ ಢಿಕ್ಕಿ ಹೊಡೆದರು. ಅದನ್ನು ಪ್ರಶ್ನಿಸಿದಕ್ಕೆ ಚಾಲಕ ಮಧ್ಯದ ಬೆರಳು ತೋರಿಸಿ ಅವಮಾನ ಮಾಡಿದರು. ಅದರಿಂದ ಕಾರು ಹಿಂಬಾಲಿಸಿದೆವು. ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ ಎಂದು ಆರೋಪಿಗಳು ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.