ನವದೆಹಲಿ: ವಿವಾಹೇತರ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 50-60 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಇ
ದನ್ನೂ ಓದಿ:ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಕಷ್ಟಕ್ಕೆ ಸ್ಪಂದಿಸದವರ ವಿರುದ್ಧ ಜಗದೀಶ್ ವಾಗ್ದಾಳಿ
ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಊರು ತುಂಬಾ ಮೆರವಣಿಗೆ ಮಾಡಿಸಿದ್ದರು ಎಂದು ವರದಿ ಹೇಳಿದೆ.
ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ದಿನಗೂಲಿ ಕೆಲಸ ಮಾಡುತ್ತಿದ್ದು, ಒಂದೇ ಗ್ರಾಮದವರಾಗಿದ್ದರು. ಈ ವ್ಯಕ್ತಿ ಮಂಗಳವಾರ ಮಹಿಳೆಯನ್ನು ಭೇಟಿಯಾಗಲು ಬಂದಾಗ ಗ್ರಾಮಸ್ಥರೆಲ್ಲಾ ಸೇರಿ ಹಿಡಿದು, ತಮ್ಮ ವಶದಲ್ಲಿ ಇಟ್ಟುಕೊಂಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
ನಂತರ ಇಬ್ಬರನ್ನೂ ನಗ್ನಗೊಳಿಸಿ ಒಂದು ಕಿಲೋ ಮೀಟರ್ ವರೆಗೆ ಮೆರವಣಿಗೆ ಮಾಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೂಡಲೇ ಘಟನೆ ಬಗ್ಗೆ ಮಾಹಿತಿ ದೊರೆತಾಗ, ಸ್ಥಳಕ್ಕೆ ಭೇಟಿ ನೀಡಿ ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.