Advertisement

ಚಿಕ್ಕಬಳ್ಳಾಪುರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

01:34 PM Sep 28, 2019 | keerthan |

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ನಡೆದಿದೆ.

Advertisement

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ನಗರದ ಟೌನ್‌ ಹಾಲ್ ಸಮೀಪದ ಗರ್ಲ್ಸ್ ಸ್ಕೂಲ್‌ ರಸ್ತೆಯ ನಿವಾಸಿ ಶಿಲ್ಪಾ (35) ಎಂದು ಗುರುತಿಸಲಾಗಿದೆ

ಗಂಡ ಮಹಾಲಯ ಅಮವಾಸೆಯ ಪ್ರಯುಕ್ತ ಪೂಜೆಗೆಂದು ಹೊರಗೆ ಹೋಗಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಿಲ್ಪಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಶಿಲ್ಪಾಗೆ ಇಬ್ಬರು ಮಕ್ಕಳು ಇದ್ದಾರೆ. ಮದುವೆಯಾಗಿ 12 ವರ್ಷ ಕಳೆದಿದೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ಆರಕ್ಷಕ ವೃತ್ತ ನಿರೀಕ್ಷಕ ಸುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಆಕೆ ಡೆತ್ ನೋಟ್ ಬರೆದಿಟ್ಟಿದ್ದು ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾಳೆ.

Advertisement

Udayavani is now on Telegram. Click here to join our channel and stay updated with the latest news.

Next