Advertisement

ಡೇಟಿಂಗ್ ಆ್ಯಪ್‌ನಲ್ಲಿ ಭೇಟಿ ; ಹೋಟೆಲ್‌ ನಲ್ಲಿ ಮಹಿಳೆಯ ಮೇಲೆ ರೇಪ್

04:26 PM Jun 10, 2022 | Team Udayavani |

ನವದೆಹಲಿ: ನೈರುತ್ಯ ದೆಹಲಿಯ ದ್ವಾರಕಾದಲ್ಲಿರುವ ಹೋಟೆಲ್‌ವೊಂದರಲ್ಲಿ 28 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾದ ವ್ಯಕ್ತಿಯೇ ಅತ್ಯಾಚಾರವೆಸಗಿದ್ದಾನೆ. ಹೈದರಾಬಾದ್ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡೇಟಿಂಗ್ ಆ್ಯಪ್‌ನಲ್ಲಿ ಆರೋಪಿಯನ್ನು ಭೇಟಿಯಾದ ನಂತರ ಮೇ 30 ರಂದು ಆ ವ್ಯಕ್ತಿಯೊಂದಿಗೆ ಹೋಟೆಲ್‌ಗೆ ಹೋದಾಗ ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಜೂನ್ 3 ರಂದು ಸಲ್ಲಿಸಿದ ಪೊಲೀಸ್ ದೂರಿನಲ್ಲಿ ಹೇಳಿದ್ದಾರೆ.ಆರೋಪಿ ತನ್ನ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು: ವಿವಾಹ ಪ್ರಸ್ತಾಪ ನಿರಾಕರಿಸಿದ ವಿಚ್ಛೇದಿತೆಯ ಮೇಲೆ ಆ್ಯಸಿಡ್‌ ದಾಳಿ

ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ ಹರ್ಷವರ್ಧನ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next