Advertisement

Vitla ಅಡಿಕೆ ಮರ ಬಿದ್ದು ಮಹಿಳೆ ಸಾವು

10:53 PM Dec 06, 2023 | Team Udayavani |

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಮುರಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರು ಸಮೀಪ ಸಂಭವಿಸಿದೆ.

Advertisement

ಸಾಲೆತ್ತೂರು ನಿವಾಸಿ ಗುಲಾಬಿ (48) ಮೃತಪಟ್ಟವರು. ಅವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ಅವರ ತಲೆಗೆ ತೀವ್ರ ಗಾಯವಾಗಿತ್ತು.

ಕೂಡಲೇ ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next