Advertisement

ಆನೆ ದಾಳಿಗೆ ಮಹಿಳೆ ಬಲಿ: ತಡವಾಗಿ ಬಂದ ಮೂಡಿಗೆರೆ ಶಾಸಕರನ್ನು ಅಟ್ಟಾಡಿಸಿ ಹಲ್ಲೆ

09:40 PM Nov 20, 2022 | Team Udayavani |

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (೪೫) ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಮೃತದೇಹ ವೀಕ್ಷಿಸಲು ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

Advertisement

ಭಾನುವಾರ ಬೆಳಗ್ಗೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ವೇಳೆ ಗ್ರಾಮಕ್ಕೆ ತೆರಳಿ ಮೃತದೇಹ ವೀಕ್ಷಿಸಲು ಮುಂದಾಗಿದ್ದರು.
ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರ ಬಟ್ಟೆ ಹಿಡಿದರು ಜಗ್ಗಾಡಿದ್ದಾರೆ. ಈ ವೇಳೆ ಶಾಸಕರು ಧರಿಸಿದ ಬಟ್ಟೆ ಹರಿದಿದೆ.

ಈ ವೇಳೆ ಉದ್ರಿಕ್ತಗೊಂಡ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಸಂಬಂಧ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದ ವೇಳೆ ನನ್ನ ಮೇಲೆ ಗ್ರಾಮಸ್ಥರು ಆಕ್ರೋಶ ಗೊಂಡಿದ್ದು ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next