Advertisement

Sullia ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

11:17 PM Oct 18, 2023 | Team Udayavani |

ಸುಳ್ಯ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಸುಂದರ ಗೌಡ ಅವರ ತೋಟದಲ್ಲಿನ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬುಧವಾರ ನಡೆದಿದೆ.

Advertisement

ಬೆಳಗ್ಗೆ ಮನೆಯವರು ತೋಟಕ್ಕೆ ಅಡಿಕೆ ಹೆಕ್ಕಲೆಂದು ಹೋದಾಗ ಕೆರೆಯಲ್ಲಿ ಮೃತದೇಹ ತೇಲುತ್ತಿರುವುದು ಕಂಡುಬಂತು. ಅನಂತರ ಊರವರು ಸ್ಥಳಕ್ಕೆ ಆಗಮಿಸಿದರು. ಮೃತರನ್ನು ಕೇರ್ಪಡ ದಿ| ಹುಕ್ರ ಅವರ ಪತ್ನಿ ಗಿರಿಜಾ (50) ಎಂದು ಗುರುತಿಸಲಾಗಿದೆ.

ಗಿರಿಜಾ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next